AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್‍ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ ಸರ್ಕಾರ ತೆರೆದಿಟ್ಟಿದೆ. ಕೋವಿಡ್ 19 […]

ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..
ಸಾಧು ಶ್ರೀನಾಥ್​
|

Updated on: Oct 13, 2020 | 4:09 PM

Share

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್‍ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು.

ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ ಸರ್ಕಾರ ತೆರೆದಿಟ್ಟಿದೆ. ಕೋವಿಡ್ 19 ಸಾಂಕ್ರಾಮಿಕ ಹೊಸ ಸವಾಲುಗಳನ್ನು ತಂದೊಡ್ಡಿದೆ.

ಇತ್ತೀಚೆಗೆ ಕರ್ನಾಟಕ ನೂತನ ಕೈಗಾರಿಕಾ ನೀತಿಯನ್ನು ಘೋಷಿಸಿದ್ದು, ಸುಸ್ಥಿರ ಮತ್ತು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದರು. ಯೋಜನೆಗಳನ್ನು ಜಾರಿಗೆ ತರಲು ಇದ್ದ ಅಡೆತಡೆಗಳನ್ನು ನಿವಾರಿಸಿ, ಹೂಡಿಕೆಗಳನ್ನು ಆಕರ್ಷಿಸುತ್ತಿದೆ.

ಕೈಗಾರಿಕೆಗಳ ಸ್ಥಾಪನೆ, ಬೆಳವಣಿಗೆ ಹಾಗೂ ನಿರ್ವಹಣೆಗೆ ಪೂರಕ ವಾತಾವರಣವನ್ನು ರಾಜ್ಯ ಹೊಂದಿದೆ. ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರೆಡೆಗಳಲ್ಲಿಯೂ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪೂರಕ ವ್ಯವಸ್ಥೆಗಳನ್ನು ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಔಷಧ ತಯಾರಿಕಾ ವಲಯದಲ್ಲಿ ಕರ್ನಾಟಕದಲ್ಲಿ ಫಾರ್ಮಾ ರಫ್ತು, ಸಂಶೋಧನೆ ಮತ್ತು ಪ್ಯಾಕೇಜಿಂಗ್‍ನಲ್ಲಿ ಕರ್ನಾಟಕದಲ್ಲಿ ಅತ್ಯುತ್ತಮ ವಾತಾವರಣವಿದೆ. ಬಯೋಕಾನ್, ಜೆನೆಕಾ, ಸೇರಿದಂತೆ ಅನೇಕ ಪ್ರಖ್ಯಾತ ಸಂಸ್ಥೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಯಾವುದೇ ಸಮಸ್ಯೆ ಇದ್ದರೂ ಅದನ್ನು ತಕ್ಷಣವೇ ಬಗೆಹರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಪಿರಮಲ್ ಗ್ರೂಪ್‍ನ ಅಧ್ಯಕ್ಷ ಆನಂದ್ ಪಿರಮಲ್ ಮಾತನಾಡಿ, ತಮ್ಮ ಸಂಸ್ಥೆಗೆ ಔಷಧ ತಯಾರಿಕೆಯಲ್ಲಿ ಅಪಾರ ಅನುಭವವಿದೆ; ಜಾಗತಿಕ ಮಟ್ಟದಲ್ಲಿ ಶಾಖೆಗಳನ್ನು ಹೊಂದಿದೆ. ಔಷಧ ತಯಾರಿಕೆಯನ್ನು ಕರ್ನಾಟಕದಲ್ಲಿ ವಿಸ್ತರಿಸಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಒಂದೇ ದಿನದಲ್ಲಿ ಅಗತ್ಯ ಅನುಮೋದನೆ ನೀಡುತ್ತಿರುವುದನ್ನು ತಿಳಿದು ಹೂಡಿಕೆಗೆ ಹಾಗೂ ಪಾಲುದಾರಿಕೆಗೆ ಸಂಸ್ಥೆ ಉತ್ಸುಕವಾಗಿದೆ ಎಂದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮಾತನಾಡಿ ರಾಜ್ಯದಲ್ಲಿ ಉದ್ಯಮಸ್ನೇಹಿ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ಕೈಗಾರಿಕಾ ಅಭಿವೃದ್ಧಿಗೆ ಎಲ್ಲಾ ಹಂತಗಳಲ್ಲಿಯೂ ಹೂಡಿಕೆಗೆ ಇರುವ ವಿಫುಲ ಅವಕಾಶಗಳ ಬಗ್ಗೆ ವಿವರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ