‘ಸಿಹಿ’ ಸುದ್ದಿ: ಸಕ್ಕರೆ ಕಾಯಿಲೆಯಿದ್ದ ಕೊರೊನಾ ಸೋಂಕಿತನಿಗೆ ಪ್ಲಾಸ್ಮಾ ಥೆರಪಿ ಯಶಸ್ವಿಯಾಯ್ತು!

| Updated By: ಆಯೇಷಾ ಬಾನು

Updated on: Jun 05, 2020 | 3:17 PM

ಬೆಂಗಳೂರು: ಕೊರೊನಾ ವೈರಸ್​ ಹಾವಳಿಗೆ ಬ್ರೇಕ್ ಹಾಕಲು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭವಾಗಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಸೋಂಕಿತ ವ್ಯಕ್ತಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ 2ನೇ ವ್ಯಕ್ತಿಗೂ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲು ವಿಫಲ; ಈಗ ಯಶಸ್ವೀ ಚಿಕಿತ್ಸೆ ಕೊರೊನಾದಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಗೆ ಮೇ 27ರಂದು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಲಾಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಕೊರೊನಾ ಸೋಂಕಿತ ವ್ಯಕ್ತಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. […]

‘ಸಿಹಿ’ ಸುದ್ದಿ: ಸಕ್ಕರೆ ಕಾಯಿಲೆಯಿದ್ದ ಕೊರೊನಾ ಸೋಂಕಿತನಿಗೆ ಪ್ಲಾಸ್ಮಾ ಥೆರಪಿ ಯಶಸ್ವಿಯಾಯ್ತು!
Follow us on

ಬೆಂಗಳೂರು: ಕೊರೊನಾ ವೈರಸ್​ ಹಾವಳಿಗೆ ಬ್ರೇಕ್ ಹಾಕಲು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭವಾಗಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಸೋಂಕಿತ ವ್ಯಕ್ತಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ 2ನೇ ವ್ಯಕ್ತಿಗೂ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲು ವಿಫಲ; ಈಗ ಯಶಸ್ವೀ ಚಿಕಿತ್ಸೆ
ಕೊರೊನಾದಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಗೆ ಮೇ 27ರಂದು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಲಾಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಕೊರೊನಾ ಸೋಂಕಿತ ವ್ಯಕ್ತಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆಯಿಂದ ವ್ಯಕ್ತಿ ಗುಣಮುಖರಾಗಿದ್ದಾರೆ. ಸದ್ಯ ಐಸಿಯುನಿಂದ ವಾರ್ಡ್​ಗೆ ಶಿಫ್ಟ್​ ಮಾಡಿ ಚಿಕಿತ್ಸೆ ಕೊಡಲಾಗುತ್ತಿದೆ.

ಇದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಪ್ಲಾಸ್ಮಾ ಥರಪಿ ಮಾಡಲಾಗಿತ್ತು. ಆದ್ರೆ ಪ್ಲಾಸ್ಮಾ ಥರಪಿ ಚಿಕಿತ್ಸೆ ಯಶಸ್ವಿಯಾಗಿರಲಿಲ್ಲ. ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಯಶಸ್ವಿಯಾಗಿದ್ದು, ಸಿಹಿ ಸುದ್ದಿ ನೀಡಿದೆ.

Published On - 11:23 am, Fri, 5 June 20