ಮೈಸೂರು ವಿವಿ 100ನೇ ಘಟಿಕೋತ್ಸವ, ಮೋದಿ ಭಾಷಣ, ಸುಧಾಮೂರ್ತಿಗೆ ಗೌ. ಡಾಕ್ಟರೇಟ್

ಮೈಸೂರು: ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಡುವೆ ಇಂದು ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕ್ರಾಫರ್ಡ್ ಹಾಲ್‌ನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡುತ್ತಾರೆ. ಹಾಗೂ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ. ಈ ವೇಳೆ ಇನ್ಫೋಸಿಸ್‌ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತೆ. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಕೇವಲ 100 ಜನರಿಗೆ […]

ಮೈಸೂರು ವಿವಿ 100ನೇ ಘಟಿಕೋತ್ಸವ, ಮೋದಿ ಭಾಷಣ, ಸುಧಾಮೂರ್ತಿಗೆ ಗೌ. ಡಾಕ್ಟರೇಟ್
ನ್ಯಾಕ್ ಪರೀಕ್ಷೆಯಲ್ಲಿ ಜಸ್ಟ್ ಪಾಸ್: ಭಾರಿ ಮುಖಭಂಗ ತಪ್ಪಿಸಿಕೊಂಡ ಮೈಸೂರು ವಿಶ್ವವಿದ್ಯಾಲಯ, ಕಾರಣ ಏನು?
Updated By: ಸಾಧು ಶ್ರೀನಾಥ್​

Updated on: Oct 19, 2020 | 10:42 AM

ಮೈಸೂರು: ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಡುವೆ ಇಂದು ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕ್ರಾಫರ್ಡ್ ಹಾಲ್‌ನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡುತ್ತಾರೆ. ಹಾಗೂ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ. ಈ ವೇಳೆ ಇನ್ಫೋಸಿಸ್‌ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತೆ.

ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಕೇವಲ 100 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ, ಡಿಸಿಎಂ ಡಾ.ಅಶ್ವಥ್ ನಾರಾಯಣ್ ಭಾಗಿಯಾಗಲಿದ್ದಾರೆ. ಈ ಬಾರಿ 29,018 ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುತ್ತಿದ್ದು, 654 ವಿದ್ಯಾರ್ಥಿಗಳಿಗೆ ಪಿ.ಹೆಚ್‌.ಡಿ. ಪ್ರದಾನ ಮಾಡಲಾಗುತ್ತೆ. ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಕೂಡಾ ಪಿ.ಹೆಚ್‌.ಡಿ. ಸ್ವೀಕರಿಸಲಿದ್ದಾರೆ.

Published On - 7:42 am, Mon, 19 October 20