Gelatin Truck Explosion Tragedy in Shivamogga: ದುರ್ಘಟನೆಯ ಬಗ್ಗೆ ಸಂತಾಪ ಸೂಚಿಸಿದ ಗಣ್ಯರು

ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿ.. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ದುರ್ಘಟನೆಯ ಬಗ್ಗೆ ಪ್ರಧಾನಿ ಮೋದಿ ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

  • TV9 Web Team
  • Published On - 9:40 AM, 22 Jan 2021
shivamogga blast Lead
ಜಿಲೆಟಿನ್ ಸ್ಫೋಟಗೊಂಡ ಸ್ಥಳ

ಶಿವಮೊಗ್ಗ: ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ದುರ್ಘಟನೆಯ ಬಗ್ಗೆ ಪ್ರಧಾನಿ ಸಂತಾಪ
ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ದುರ್ಘಟನೆಯ ಬಗ್ಗೆ ಪ್ರಧಾನಿ ಮೋದಿ ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಟ್ವೀಟ್‌ ಮೂಲಕ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸ್ಫೋಟದಿಂದ ಕಾರ್ಮಿಕರು ಮೃತಪಟ್ಟಿರೋದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಟ್ವಿಟ್ಟರ್​ನಲ್ಲಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್‌ ಲಾರಿ ಸ್ಫೋಟಗೊಂಡು 6ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.