ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ.ಅನಂತ್ಗೆ ದೂರವಾಣಿ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿ, ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ನಾಳೆ ಅಮಿತ್ ಶಾ ಉಡುಪಿಗೆ ಭೇಟಿ ಸಾಧ್ಯತೆ: ಪೇಜಾವರ ಮಠದ ಶ್ರೀಗಳ ಆರೋಗ್ಯ ವಿಚಾರಿಸಲು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮಣಿಪಾಲ ವೈದ್ಯಾಧಿಕಾರಿಗಳ […]
ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ.ಅನಂತ್ಗೆ ದೂರವಾಣಿ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿ, ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.
ನಾಳೆ ಅಮಿತ್ ಶಾ ಉಡುಪಿಗೆ ಭೇಟಿ ಸಾಧ್ಯತೆ: ಪೇಜಾವರ ಮಠದ ಶ್ರೀಗಳ ಆರೋಗ್ಯ ವಿಚಾರಿಸಲು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮಣಿಪಾಲ ವೈದ್ಯಾಧಿಕಾರಿಗಳ ಜೊತೆ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ನಾಳೆ ಮಂಗಳೂರು ಭೇಟಿ ವೇಳೆ ಆಸ್ಪತ್ರೆಗೆ ಭೇಟಿ ಕೊಡುವುದಾಗಿ ಸಿಎಂ ಬಿಎಸ್ವೈ ತಿಳಿಸಿದ್ದಾರೆ.
Published On - 12:26 pm, Fri, 20 December 19