ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ.ಅನಂತ್​ಗೆ ದೂರವಾಣಿ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿ, ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ನಾಳೆ ಅಮಿತ್ ಶಾ ಉಡುಪಿಗೆ ಭೇಟಿ ಸಾಧ್ಯತೆ: ಪೇಜಾವರ ಮಠದ ಶ್ರೀಗಳ ಆರೋಗ್ಯ ವಿಚಾರಿಸಲು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮಣಿಪಾಲ ವೈದ್ಯಾಧಿಕಾರಿಗಳ […]

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಸಾಧು ಶ್ರೀನಾಥ್​

Updated on: Dec 20, 2019 | 12:30 PM

ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ.ಅನಂತ್​ಗೆ ದೂರವಾಣಿ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿ, ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ನಾಳೆ ಅಮಿತ್ ಶಾ ಉಡುಪಿಗೆ ಭೇಟಿ ಸಾಧ್ಯತೆ:
ಪೇಜಾವರ ಮಠದ ಶ್ರೀಗಳ ಆರೋಗ್ಯ ವಿಚಾರಿಸಲು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮಣಿಪಾಲ ವೈದ್ಯಾಧಿಕಾರಿಗಳ ಜೊತೆ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ನಾಳೆ ಮಂಗಳೂರು ಭೇಟಿ ವೇಳೆ ಆಸ್ಪತ್ರೆಗೆ ಭೇಟಿ ಕೊಡುವುದಾಗಿ ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

Published On - 12:26 pm, Fri, 20 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us