AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್ ವೇಳೆ ಬಾಲ್ಯ ವಿವಾಹ.. ಇಬ್ಬರ ಗರ್ಭಿಣಿ ಮಾಡಿದ ತಪ್ಪಿಗೆ ಪತಿಯರ ವಿರುದ್ಧ ಕೇಸ್

Pocso act | ಲಾಕ್‌ಡೌನ್ ವೇಳೆ 16 ಹಾಗೂ 17 ವರ್ಷದ ಇಬ್ಬರು ಬಾಲಕಿಯರಿಗೆ ಬಾಲ್ಯವಿವಾಹ ಮಾಡಲಾಗಿದೆ. ಸದ್ಯ ಇಬರಿಬ್ಬರು ಗರ್ಭಿಣಿಯರಾಗಿದ್ದು ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಇವರ ಪತಿಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಕೊರೊನಾ ಲಾಕ್​ಡೌನ್ ವೇಳೆ ಬಾಲ್ಯ ವಿವಾಹ.. ಇಬ್ಬರ ಗರ್ಭಿಣಿ ಮಾಡಿದ ತಪ್ಪಿಗೆ ಪತಿಯರ ವಿರುದ್ಧ ಕೇಸ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 25, 2021 | 3:12 PM

ಬೆಳಗಾವಿ: ಕೊರೊನಾ ಲಾಕ್​ಡೌನ್ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನ ವಿವಾಹವಾಗಿ ಗರ್ಭಿಣಿಯರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ವಿವಾಹವಾಗಿದ್ದ ಪತಿಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಬಾಲಕಿಯರು ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್​ಗಳು ದಾಖಲಾಗಿವೆ. ಲಾಕ್‌ಡೌನ್ ವೇಳೆ 16 ಹಾಗೂ 17 ವರ್ಷದ ಇಬ್ಬರು ಬಾಲಕಿಯರಿಗೆ ಬಾಲ್ಯವಿವಾಹ ಮಾಡಲಾಗಿದೆ. ಸದ್ಯ ಇವರಿಬ್ಬರು ಗರ್ಭಿಣಿಯರಾಗಿದ್ದು ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಇವರ ಪತಿಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಪತಿಯಂದಿರ ವಿರುದ್ಧ ಈ ರೀತಿ ಕೇಸ್ ದಾಖಲಾಗಿರುವುದು. ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗರ್ಭಿಣಿಯಾದ ಇಬ್ಬರು ಬಾಲಕಿಯರು ಹೆರಿಗೆಗೆಂದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು.

ಈ ವೇಳೆ ಅವರ ಆಧಾರ್ ಕಾರ್ಡ್​ನಲ್ಲಿ ನಮೂದಾದ ಜನ್ಮ ದಿನಾಂಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರವೀಂದ್ರ ರತ್ನಾಕರ ಸಂತ್ರಸ್ತ ಬಾಲಕಿಯರ ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ. ನಂತರ ಪತಿಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ನೀಡಿದ್ದಾರೆ. 2020ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಒಟ್ಟು 115 ಬಾಲ್ಯವಿವಾಹ ದೂರುಗಳು ದಾಖಲಾಗಿವೆ. ಈ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ 108 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ಬಾಲಕಿಯರ ಕುಟುಂಬಸ್ಥರಿಗೆ ತಿಳಿ ಹೇಳಿ ಅವರ ವಿದ್ಯಾಭ್ಯಾಸ ಮುಂದುವರೆಸುವಂತೆ ಓಲೈಕೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡವೆಂದು ಪತಿ ಕೊಂದ ಪತ್ನಿ ಇನ್ನು ಇದೇ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಅನೈತಿಕ ಸಂಬಂಧಕ್ಕೆ ಅಡ್ಡವೆಂದು ಪತ್ನಿ ತನ್ನ ಪತಿಯನ್ನೇ ಹತ್ಯೆ ಮಾಡಿಸಿದ ಘಟನೆ ನಡೆದಿದೆ. ಪತಿ ಸಾಗರ್ ಹತ್ಯೆಗೆ ಪತ್ನಿ ನಿಂಗಮ್ಮ ಸುಪಾರಿ ನೀಡಿದ್ದರು. ಈ ಸಂಬಂಧ ನಿಂಗಮ್ಮ, ಪ್ರಿಯಕರ ಸೇರಿದಂತೆ ಮೂವರು ಆರೋಪಿಗಳನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕೋಳ್ಯಾನಟ್ಟಿ ಗ್ರಾಮದ ಬಾಳಪ್ಪ ದಿನ್ನಿ, ಬಸವರಾಜ ಉಪ್ಪಾರ, ಬೈಲಹೊಂಗಲ ತಾಲೂಕಿನ ಸಂಪಗಾವಿಯ ಮಂಜುನಾಥ್ ಅರೆಸ್ಟ್ ಆದ ಆರೋಪಿಗಳು. ಸಾಗರ್ ತಂದೆ ಗಂಗಪ್ಪ ಮಾರ್ಕೆಟ್ ಠಾಣೆಗೆ ಕೊಲೆಯಾದ ಬಗ್ಗೆ ದೂರು ನೀಡಿದ್ರು. ಫೆ. 22ರಂದು ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ಉಳವಿ ಬಳಿ ಕಂದಕದಲ್ಲಿ ಸಾಗರ್ ಶವ ಪತ್ತೆಯಾಗಿತ್ತು. ಈ ಕೇಸ್​ ಬೆನ್ನು ಹತ್ತಿದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆಯಾದ ಸಾಗರ್ ಪತ್ನಿ ನಿಂಗಮ್ಮ ಜೊತೆ ಆರೋಪಿ ಬಾಳಪ್ಪ ಅನೈತಿಕ ಸಂಬಂಧ‌ ಹೊಂದಿದ್ದ. ಈತ ನಿಂಗಮ್ಮಗೆ ಸೋದರ ಮಾವ. ಇವರಿಬ್ಬರ ಸಂಬಂಧಕ್ಕೆ ಅಡ್ಡವೆಂದು ಗಂಡ ಸಾಗರ್‌ನನ್ನು ಕೊಲ್ಲುವಂತೆ ಬಾಳಪ್ಪಗೆ ನಿಂಗಮ್ಮ ಸುಪಾರಿ ಕೊಟಿದ್ದಳು. ನನ್ನ ಗಂಡನನ್ನು ಕೊಂದರೆ ನನ್ನ ಬಳಿ ಇರುವ ಚಿ‌ನ್ನಾಭರಣ ನೀಡೋದಾಗಿ ಹೇಳಿದ್ದಳು. ಹೀಗಾಗಿ ಸ್ನೇಹಿತರಿಬ್ಬರ ಜೊತೆಗೂಡಿ ಸಾಗರ್‌ನನ್ನು ಉಳವಿಗೆ ಕರೆದೊಯ್ದು ಆರೋಪಿಗಳು ಹತ್ಯೆ ಮಾಡಿದ್ದರು. ಮದ್ಯಪಾನ ಮಾಡಿಸಿ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆಗೈದಿದ್ದರು. ಬಳಿಕ ಕಾಡಿನಲ್ಲಿ ಶವ ಬಿಸಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: Murder 9 ತಿಂಗಳ ಹಿಂದಷ್ಟೇ.. ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಕೊಂದ ಪತಿರಾಯ

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್