AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ
ಆರೋಪಿಗಳಿಂದ ಪೊಲೀಸರು ವಶ ಪಡಿಸಿಕೊಂಡ ಮೊಬೈಲ್ ಮತ್ತು ಹಣ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 25, 2021 | 12:43 PM

Share

ಬೆಂಗಳೂರು: OLX ನಲ್ಲಿ ವಸ್ತು ಮಾರಾಟ ಮಾಡುತ್ತಿದ್ದವರ ಬಳಿ ದರೋಡೆ ಮಾಡ್ತಿದ್ದ ಮೂವರನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮೊದಲಿಗೆ ಈ ದರೋಡೆಕೋರರು OLXನಲ್ಲಿ ವಸ್ತುಗಳನ್ನು ಸರ್ಚ್ ಮಾಡುತ್ತಾರೆ. ಬಳಿಕ ಪ್ಲಾನ್ ಮಾಡಿ ವಸ್ತು ಖರೀದಿಸುವ ನೆಪದಲ್ಲಿ ವಸ್ತು ಮಾರಾಟಕ್ಕೆ ಮುಂದಾಗಿರುವ ವ್ಯಕ್ತಿಗೆ ಕರೆ ಮಾಡಿ ವಸ್ತು ನೋಡಬೇಕೆಂದು ಒಂದು ಲೊಕೇಷನ್ ಫಿಕ್ಸ್ ಮಾಡಿ ಕರೆಸಿಕೊಳ್ಳುತ್ತಿದ್ದರು. ಬಳಿಕ ವ್ಯಕ್ತಿ ಬಂದ ಮೇಲೆ ವಸ್ತು ನೋಡುವಂತೆ ನಾಟಕವಾಡಿ ಪಕ್ಕದ ಏರಿಯಾದಲ್ಲೇ ಮನೆ ಇದೆ ಅಲ್ಲೇ ಹಣ ಕೊಡೋದಾಗಿ ಕರೆದುಕೊಂಡು ಹೋಗಿ ಗುಂಪು ಗುಂಪಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ದೋಚುತ್ತಿದ್ದರು. ಇದೇ ರೀತಿ ಜನವರಿ 23ರಂದು ವ್ಯಕ್ತಿಯೋರ್ವನಿಂದ ದರೋಡೆ ಮಾಡಿದ್ದಾರೆ.

ಮೊಬೈಲ್ ಖರೀದಿಸುವ ನೆಪ ಮಾಡಿ ಚಿಕ್ಕಪೇಟೆ ಮೆಟ್ರೋ ಸ್ಟೇಷನ್​ಗೆ ಕರೆಸಿಕೊಂಡು ನಂತರ ಅಮ್ಮನ ಬಳಿ ಹಣ ಇದೆ ಕೊಡ್ತೀನಿ ಅಂತ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಲ್ವರು ಜೊತೆಗೂಡಿ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ದರೋಡೆಗೊಳಗಾದ ವ್ಯಕ್ತಿ ಕೆ.ಆರ್. ಮಾರುಕಟ್ಟೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾದ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ