ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಾಲ್ಕು ಜನ ಅಪ್ರಾಪ್ತ ವಯಸ್ಕರರು ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು, ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಆರೋಪಿಯೊಬ್ಬ ಬಾಲಕಿಯ ತಾಯಿಗೆ ಅತ್ಯಾಚಾರದ ವಿಡಿಯೋ ಕಳುಹಿಸಿದ್ದರಿಂದ ಘಟನೆ ನಡೆದು ಒಂದು ತಿಂಗಳ ನಂತರ ಅತ್ಯಾಚಾರ ಪ್ರಕರಣ ಬಯಲಾಗಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ನೊಂದ ಅಪ್ರಾಪ್ತೆಯಿಂದ ಚಿಕ್ಕಬಳ್ಳಾಪುರ ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆರೋಪಿಗಳು ಬಾಲಕಿಯ ಮನೆಯಲ್ಲೇ ಅತ್ಯಾಚಾರ ಎಸಗಿ ಘಟನೆಯನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಪೊಲೀಸರಿಂದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಚಿಕ್ಕಮಗಳೂರಲ್ಲಿ ಅಪ್ರಾಪ್ತೆ ಮೇಲೆ ಕಾಮಂಧರ ಕ್ರೌರ್ಯ: ಬಾಲಕಿಯ ಚಿಕ್ಕಮ್ಮ ಸೇರಿದಂತೆ 14 ಜನರ ಮೇಲೆ FIR
Published On - 12:57 pm, Mon, 1 February 21