ಮನೆ, ದೇಗುಲಗಳಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್
ಆರೋಪಿಗಳು ಕಳೆದ ಆರು ತಿಂಗಳ ಹಿಂದಷ್ಟೇ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದರು. ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವಾಗ ಆರೋಪಿಗಳು ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡಿದ್ದರು.
ಬೆಳಗಾವಿ: ಮನೆ ಮತ್ತು ದೇಗುಲಗಳಲ್ಲಿ ಕಳ್ಳತನ ಮಾಡುತ್ತಿದ್ದ ಗುಂಪೊಂದನ್ನು ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆ ಪೊಲೀಸರು ಬಂಧಿಸಿ, ಬಂಧಿತರಿಂದ 18.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕಳೆದ ಆರು ತಿಂಗಳ ಹಿಂದಷ್ಟೇ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದರು. ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವಾಗ ಆರೋಪಿಗಳು ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡಿದ್ದರು. ಆ ಬಳಿಕ ಮತ್ತೆ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧೆಡೆ 12 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಯಮಕನಮರಡಿ ಸೇರಿದಂತೆ ನಾಲ್ಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮೊಬೈಲ್ ಲೋಕೇಷನ್ ಆಧರಿಸಿ ಆರೋಪಿಗಳಾದ ಜಿಲ್ಲೆಯ ಗೋಕಾಕ ತಾಲೂಕಿನ ಅರಭಾವಿ ಗ್ರಾಮದ ಸಂತೋಷ, ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿ ವಿಶಾಲ್ ಮತ್ತು ಚಿನ್ನದ ವ್ಯಾಪಾರಿ ಚಂದ್ರಕಾಂತ ಪೋತದಾರರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ
ನಿವೃತ್ತ ಡಿಜಿ, ಐಜಿಪಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ ಮಾಡಿದ ದುಷ್ಕರ್ಮಿಗಳಿಂದ ಹಣಕ್ಕೆ ಡಿಮ್ಯಾಂಡ್
ಹೂತಿಟ್ಟಿದ್ದ ಪೆಟ್ಟಿಗೆಯಲ್ಲಿನ ಬೆಳ್ಳಿ ದೋಚಲು ಈ ಕಳ್ಳರು ಸುಮಾರು ಒಂದು ಕೋಟಿ ರೂಪಾಯಿ ಖರ್ಚು ಮಾಡಿದರು!
Published On - 2:10 pm, Sun, 28 February 21