AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ, ಕೆಲಸ ಮಾಡ್ತಿದ್ದ ಸ್ಥಳಕ್ಕೆ ಬಂದು ಯುವತಿಯ ಬಟ್ಟೆ ಹರಿದ.. ಟಾರ್ಚರ್ ಕೊಟ್ಟ ಖದೀಮ ಬಂಧನ

ಶ್ರವಣ್‌ಕುಮಾರ್ ಎಂಬ ವ್ಯಕ್ತಿ ತನಗೆ ಮಾರಣಾಂತಿಕ ಕಾಯಿಲೆ ಇದೆ. ಹೆಚ್ಚು ದಿನ ಬದುಕುವುದಿಲ್ಲ ಎಂದು ನಂಬಿಸಿ ಸಿಂಪತಿಯನ್ನು ಹುಟ್ಟಿಸಿ ಫೇಸ್ ಬುಕ್​ನಲ್ಲಿ ಯುವತಿಯ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ನಂಬರ್ ಪಡೆದು ಸಲಿಗೆ ಬೆಳಸಿ ಪರಿಚಯವಾದ ಸ್ವಲ್ಪ ದಿನದ ನಂತರ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಲು ಶುರು ಮಾಡಿದ್ದ.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ, ಕೆಲಸ ಮಾಡ್ತಿದ್ದ ಸ್ಥಳಕ್ಕೆ ಬಂದು ಯುವತಿಯ ಬಟ್ಟೆ ಹರಿದ.. ಟಾರ್ಚರ್ ಕೊಟ್ಟ ಖದೀಮ ಬಂಧನ
ಶ್ರವಣ್‌ಕುಮಾರ್
ಆಯೇಷಾ ಬಾನು
| Edited By: |

Updated on:Feb 02, 2021 | 10:10 AM

Share

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಯುವತಿಯ ಪರಿಚಯ ಮಾಡಿಕೊಂಡು ಆಕೆಗೆ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದ್ದು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಶ್ರವಣ್‌ಕುಮಾರ್ ಬಂಧಿತ ವ್ಯಕ್ತಿ.

ಘಟನೆ ಹಿನ್ನೆಲೆ ಶ್ರವಣ್‌ಕುಮಾರ್ ಎಂಬ ವ್ಯಕ್ತಿ ತನಗೆ ಮಾರಣಾಂತಿಕ ಕಾಯಿಲೆ ಇದೆ. ಹೆಚ್ಚು ದಿನ ಬದುಕುವುದಿಲ್ಲ ಎಂದು ನಂಬಿಸಿ ಸಿಂಪತಿಯನ್ನು ಹುಟ್ಟಿಸಿ ಫೇಸ್ ಬುಕ್​ನಲ್ಲಿ ಯುವತಿಯ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ನಂಬರ್ ಪಡೆದು ಸಲಿಗೆ ಬೆಳಸಿ ಪರಿಚಯವಾದ ಸ್ವಲ್ಪ ದಿನದ ನಂತರ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಲು ಶುರು ಮಾಡಿದ್ದ. ತನ್ನ ಜೊತೆ ಒಂದು ರಾತ್ರಿ ಕಳೆಯುವಂತೆ ಟಾರ್ಚರ್ ಮಾಡಿದ್ದ. ನೊಂದ ಯುವತಿ ಶ್ರವಣ್​ಗೆ ಬುದ್ಧಿ ಹೇಳಿದರೂ ಕೇಳದೆ ಕಿರುಕುಳ ನೀಡಿದ್ದಾನೆ. ಕೊನೆಗೆ ಬೇಸತ್ತ ಯುವತಿ ಆತನ ನಂಬರ್ ಬ್ಲಾಕ್ ಮಾಡಿದ್ಳು.

ಆದ್ರೂ ಟಾರ್ಚರ್ ನಿಂತಿಲ್ಲ. ಬ್ಲಾಕ್‌ ಲಿಸ್ಟ್‌ನಿಂದ ತನ್ನ ನಂಬರ್ ರಿಮೂವ್ ಮಾಡುವಂತೆ ಮತ್ತೆ ಕಿರುಕುಳ ನೀಡಿದ್ದಾನೆ. ಯುವತಿ ಕೆಲಸ ಮಾಡ್ತಿದ್ದ ಸ್ಥಳಕ್ಕೆ ತೆರಳಿ ಆಕೆಯ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಶ್ರವಣ್‌ ಕುಮಾರ್ ವಿರುದ್ಧ ಯುವತಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ‌ ದೂರು ನೀಡಿದ್ದಾಳೆ. ದೂರು ಆಧರಿಸಿ ಪೊಲೀಸರು ಶ್ರವಣ್​ನನ್ನು ಬಂಧಿಸಿದ್ದಾರೆ.

ಫೇಸ್​ಬುಕ್​ ಪರಿಚಯ: 35 ವರ್ಷದ ಪುರುಷನನ್ನು ಮದುವೆಯಾದ 81 ವರ್ಷ ವಯಸ್ಸಿನ ಅಜ್ಜಿ!

Published On - 8:14 am, Tue, 2 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ