
ಕೊಪ್ಪಳ: ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸರು ವೃದ್ಧನನ್ನು ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಮೊಹರಂ ಆಚರಣೆ ವೇಳೆ ಕುಣಿಯಲು ಮುಂದಾದ ಗ್ರಾಮಸ್ಥರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ರು. ಕೋಪಗೊಂಡ ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು.
ಈ ವೇಳೆ ವೃದ್ಧನನ್ನು ಎಳೆತಂದು ಪೊಲೀಸರು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ದೃಶ್ಯ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.