ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ

|

Updated on: Jan 02, 2020 | 3:28 PM

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ. ಹಲವೆಡೆ […]

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ
Follow us on

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ.

ಹಲವೆಡೆ ನೂರಾರು ರೈತರನ್ನು ವಶಕ್ಕೆ ಪಡೆದ ಪೊಲೀಸ್:
ಮೋದಿಗೆ ರೈತರ ಪ್ರತಿಭಟನೆಯ ‌ಬಿಸಿ ತಟ್ಟುವ ಹಿನ್ನೆಲೆ ಹಲವೆಡೆ ಪೊಲೀಸರಿಂದ ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಚಿಕ್ಕನಾಯಕನಹಳ್ಳಿ, ಕುಣಿಗಲ್, ಕೊರಟಗೆರೆ, ತಿಪಟೂರು ಸೇರಿದಂತೆ ಹಲವೆಡೆ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವರ್ತನೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:01 am, Thu, 2 January 20