
ಬೆಳಗಾವಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಬಂದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತಕ್ಕೆ ಬಂದು ಸಂಭ್ರಮಾಚರಣೆ ಮಾಡುತ್ತಿದ್ದ ಯುವಕರು ಗುಂಪು ಗುಂಪಾಗಿ ಸೇರಿದ್ದಕ್ಕೆ ಅವರನ್ನ ಓಡಿಸಲು ಪೊಲೀಸರು ಲಾಠಿ ಬೀಸಿದರು. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಯುವಕರು ಎದ್ನೋಬಿದ್ನೊ ಅಂತಾ ದಿಕ್ಕಾಪಾಲಾಗಿ ಓಡಿದರು. ಪೊಲೀಸರ ಕ್ರಮಕ್ಕೆ ಕನ್ನಡಪರ ಹೋರಾಟಗಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.