ದೊಡ್ಡಬಳ್ಳಾಪುರದಲ್ಲಿ ಸದ್ದು ಮಾಡಿದ ಖಾಕಿ ಗನ್​: ಕೊಲೆ ಆರೋಪಿಗಳ ಮೇಲೆ ಫೈರಿಂಗ್‌

  • Publish Date - 7:12 pm, Thu, 10 September 20
ದೊಡ್ಡಬಳ್ಳಾಪುರದಲ್ಲಿ ಸದ್ದು ಮಾಡಿದ ಖಾಕಿ ಗನ್​: ಕೊಲೆ ಆರೋಪಿಗಳ ಮೇಲೆ ಫೈರಿಂಗ್‌
ಸಾಂದರ್ಭಿಕ ಚಿತ್ರ

ಬೆಂಗಳೂರು ಗ್ರಾಮಾಂತರ: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬೆಳವಂಗಲ ಬಳಿ ಬೆಳಕಿಗೆ ಬಂದಿದೆ.

ಆಗಸ್ಟ್‌ 16ರಂದು ಮಂಜುನಾಥ್‌ ಎಂಬಾತನ ಹತ್ಯೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಲಾಯಿತು ಎಂದು ತಿಳಿದುಬಂದಿದೆ. ಹಾಗಾಗಿ, ಕೊಲೆ ಆರೋಪಿಗಳಾದ ಹೇಮಂತ್‌ ಕುಮಾರ್‌ ಹಾಗೂ ಸೋನು ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

DySP ರಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಫೈರಿಂಗ್​ನಲ್ಲಿ ಆರೋಪಿಗಳಿಬ್ಬರಿಗೂ ಗಾಯಗಳಾಗಿವೆ ಎಂದು ಹೇಳಲಾಗಿದೆ. ಹಾಗಾಗಿ, ಇಬ್ಬರು ಆರೋಪಿಗಳನ್ನ ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.