Police Firing ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ ಆರೋಪಿ ಮೇಲೆ ಫೈರಿಂಗ್
Police Open Fire | ಮೂವರು ಆರೋಪಿಗಳನ್ನ ಕರೆತರುತ್ತಿದ್ದ ವೇಳೆ ಹಂದನಹಳ್ಳಿ ಗೇಟ್ ಬಳಿ ಆರೋಪಿ ಜಯಂತ್, ಹೆಡ್ ಕಾನ್ಸ್‌ಟೇಬಲ್ ರವಿ ಮತ್ತು ಕಾನ್ಸ್‌ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಜಯಪ್ರಕಾಶ್ ಗುಂಡಿನ ದಾಳಿ ನಡೆಸಿದ್ದಾರೆ.
ಮೈಸೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಆರೋಪಿಗಳ ಪೈಕಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ನಡೆದಿದೆ. ಆರೋಪಿ ಜಯಂತ್ನನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 22ರಂದು ಕ್ಷುಲ್ಲಕ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದರು. ಹಲ್ಲೆ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಳಿ ಜಯಂತ್, ವಿಘ್ನೇಶ್, ದೀಪಕ್‌ನನ್ನು ಬಿಳಿಕೆರೆ ಪೊಲೀಸರು ಅರೆಸ್ಟ್ ಮಾಡಿದ್ದರು.
ಮೂವರು ಆರೋಪಿಗಳನ್ನ ಕರೆತರುತ್ತಿದ್ದ ವೇಳೆ ಹಂದನಹಳ್ಳಿ ಗೇಟ್ ಬಳಿ ಆರೋಪಿ ಜಯಂತ್, ಹೆಡ್ ಕಾನ್ಸ್‌ಟೇಬಲ್ ರವಿ ಮತ್ತು ಕಾನ್ಸ್‌ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಜಯಪ್ರಕಾಶ್ ಗುಂಡಿನ ದಾಳಿ ನಡೆಸಿದ್ದಾರೆ. ಜಯಂತ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸದ್ಯ ಆರೋಪಿ ಜಯಂತ್, ಹೆಡ್ ಕಾನ್ಸ್‌ಟೇಬಲ್ ರವಿ ಮತ್ತು ಕಾನ್ಸ್‌ಟೇಬಲ್ ರವಿ ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು
Published On - 8:59 am, Wed, 10 February 21