ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

|

Updated on: Oct 07, 2020 | 7:58 AM

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳೆಂಬೆಳಗ್ಗೆ ಪೊಲೀಸ್ ಬಂದೂಕು ಸದ್ದು ಮಾಡಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ. ಮೆಹಬೂಬ್ ನಗರ ನಿವಾಸಿ ಮುದೀನ್(25) ಮೇಲೆ ಕಲಬುರಗಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸೋಮಲಿಂಗ್ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು. ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ […]

ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..
Follow us on

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳೆಂಬೆಳಗ್ಗೆ ಪೊಲೀಸ್ ಬಂದೂಕು ಸದ್ದು ಮಾಡಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ.

ಮೆಹಬೂಬ್ ನಗರ ನಿವಾಸಿ ಮುದೀನ್(25) ಮೇಲೆ ಕಲಬುರಗಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸೋಮಲಿಂಗ್ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು.

ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಮುದೀನ್ ಕಾಲಿಗೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಹಾಗೂ ಗಾಯಾಳು ಮುದೀನ್​ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.