ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು ಮಾಡಿದೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ ಪ್ರವೀಣ್(22) ಕಾಲಿಗೆ ಪೀಣ್ಯಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಗಾಯಾಳು ಹೆಡ್ ಕಾನ್ಸ್‌ಟೇಬಲ್ ಹಾಗೂ ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ರಾಜಗೋಪಾಲನಗರ, ಪೀಣ್ಯಾ ಠಾಣೆಗಳಲ್ಲಿ ಹಲ್ಲೆ, ಡಕಾಯಿತಿ ಪ್ರಕರಣಗಳಿವೆ.