ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಖಂಡಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ನಿಧನ
2018ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಿಣಿಗಳ ಹಸ್ತಕ್ಷೇಪದ ವಿರುದ್ಧ ಆರ್.ಪಿ.ಶರ್ಮಾ ಧ್ವನಿ ಎತ್ತಿದ್ದರು. ಅವರು ಬರೆದಿದ್ದ ಪತ್ರವೊಂದು ಮಾಧ್ಯಮಗಳಿಗೆ ಸೋರಿಕೆಯಾದ ಹಿನ್ನೆಲೆಯಲ್ಲಿ ಸರ್ಕಾರವು ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಿತ್ತು.

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಬುಧವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಹು ಅಂಗಾಂಗಳ ವೈಫಲ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿ ತೆರವುಗೊಳಿಸಲು ಶರ್ಮಾ ಹಲವು ಕಠಿಣ ನಿರ್ಧಾರಗಳನ್ನು ಕೈಗೊಂಡು ಜನಪ್ರಿಯರಾಗಿದ್ದರು.
ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷರಾಗಿದ್ದ ಶರ್ಮಾ ಕಳೆದ ಸೆಪ್ಟೆಂಬರ್ 2ರಂದು ಗುಂಡೇಟಿನಿಂದ ಗಾಯಗೊಂಡಿದ್ದರು. ಗನ್ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಗುಂಡು ಹಾರಿತ್ತು ಎಂದು ನಂತರ ಹೇಳಿಕೆ ನೀಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದ ಶರ್ಮಾ ಈಚೆಗೆ ಕ್ಯಾನ್ಸರ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶರ್ಮಾ 2020ರ ಡಿ.21ರಂದು ನಿವೃತ್ತರಾಗಿದ್ದರು.
ರಾಜಕೀಯ ಹಸ್ತಕ್ಷೇಪ ಖಂಡಿಸಿದ್ದ ಅಧಿಕಾರಿ 2018ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಿಣಿಗಳ ಹಸ್ತಕ್ಷೇಪದ ವಿರುದ್ಧ ಆರ್.ಪಿ.ಶರ್ಮಾ ಧ್ವನಿ ಎತ್ತಿದ್ದರು. ಅವರು ಬರೆದಿದ್ದ ಪತ್ರವೊಂದು ಮಾಧ್ಯಮಗಳಿಗೆ ಸೋರಿಕೆಯಾದ ಹಿನ್ನೆಲೆಯಲ್ಲಿ ಸರ್ಕಾರವು ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಿತ್ತು.
2017ರಲ್ಲಿ ಶರ್ಮಾ ಬೆಂಗಳೂರು ಮಹಾನಗರ ಕಾರ್ಯಪಡೆಯ ಮುಖ್ಯಸ್ಥರಾಗಿದ್ದರು. ಈ ವೇಳೆ ರಾಜಕಾಲುವೆ ಮತ್ತು ಇತರ ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಲು ಖಡಕ್ ತೀರ್ಮಾನ ತೆಗೆದುಕೊಂಡು ಜನಪ್ರಿಯರಾಗಿದ್ದರು. ಬಿಬಿಎಂಪಿ ಎಂಜಿನಿಯರ್ಗಳು ಮತ್ತು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಸಲ್ಲಿಸುತ್ತಿದ್ದ ದೂರುಗಳ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳುತ್ತಿದ್ದರು. ಈ ನಡೆಯು ಜನಮೆಚ್ಚುಗೆಗೆ ಪಾತ್ರವಾಗಿತ್ತು.
Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ
Published On - 10:37 pm, Wed, 3 February 21




