ತಾಜಾ ಪರಿಸ್ಥಿತಿ ಏನು? ಟೋಟಲ್ ಕರ್ಫ್ಯೂ, ರಸ್ತೆಗಿಳಿದವರಿಗೆ ಪೊಲೀಸ್ ಬೆತ್ತದ ರುಚಿ
ಬೆಂಗಳೂರು: ಫೇಸ್ ಬುಕ್ ಪೋಸ್ಟ್ನಿಂದ ತಡರಾತ್ರಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಜನರ ನಿದ್ದೆ ಕೆಡಿಸಿತ್ತು. ಆತಂಕಕ್ಕೆ ಒಳಗಾಗುವಂತೆ ಮಾಡಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಈಗ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಬೆಂಗಳೂರಿನ ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ. ಅನಗತ್ಯವಾಗಿ ರಸ್ತೆಗೆ ಬರುವವರಿಗೆ ಪೊಲೀಸರು ವಾರ್ನಿಂಗ್ ಕೊಟ್ಟು ಲಾಠಿ ಏಟು ನೀಡಿ ವಾಪಸ್ ಕಳಿಸುತ್ತಿದ್ದಾರೆ. ಡಿ.ಜೆ.ಹಳ್ಳಿ ಮುಖ್ಯರಸ್ತೆ ಸರ್ಕಲ್‌ನಲ್ಲಿ ಹೆಚ್ಚಿನ ಭದ್ರತೆಗಾಗಿ 4 ಕೆಎಸ್‌ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿ ಕಂಟ್ರೋಲ್ಗೆ ತರುವ […]

ಬೆಂಗಳೂರು: ಫೇಸ್ ಬುಕ್ ಪೋಸ್ಟ್ನಿಂದ ತಡರಾತ್ರಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಜನರ ನಿದ್ದೆ ಕೆಡಿಸಿತ್ತು. ಆತಂಕಕ್ಕೆ ಒಳಗಾಗುವಂತೆ ಮಾಡಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಈಗ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಬೆಂಗಳೂರಿನ ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.
ಅನಗತ್ಯವಾಗಿ ರಸ್ತೆಗೆ ಬರುವವರಿಗೆ ಪೊಲೀಸರು ವಾರ್ನಿಂಗ್ ಕೊಟ್ಟು ಲಾಠಿ ಏಟು ನೀಡಿ ವಾಪಸ್ ಕಳಿಸುತ್ತಿದ್ದಾರೆ. ಡಿ.ಜೆ.ಹಳ್ಳಿ ಮುಖ್ಯರಸ್ತೆ ಸರ್ಕಲ್‌ನಲ್ಲಿ ಹೆಚ್ಚಿನ ಭದ್ರತೆಗಾಗಿ 4 ಕೆಎಸ್‌ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿ ಕಂಟ್ರೋಲ್ಗೆ ತರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಸ್ಟೇಷನ್ಗಳ ಪೊಲೀಸ್ ಸಿಬ್ಬಂದಿಯನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಬಳಿ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.




