ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್​ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಶರಣಾಗಲು ಇನ್ಸ್ಪೆಕ್ಟರ್ ಸುನಿಲ್ […]

Ayesha Banu

|

Oct 12, 2020 | 7:24 AM

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು.

ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್​ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಶರಣಾಗಲು ಇನ್ಸ್ಪೆಕ್ಟರ್ ಸುನಿಲ್ ನಾಯಕ್ ಸೂಚಿಸಿದ್ರು.

ಆದರೆ ಶರಣಗಾದೆ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾನೆ. ಹೀಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಲಾಗಿದೆ. ಈಗ ಆರೋಪಿಗೆ KC ಜನರಲ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚೆನ್ನೈ ಮೂಲದ ದಿನೇಶ್ ನಾಲ್ಕು ವರ್ಷದ ಮಗವನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿದ್ದ. ಮಗುವಿನ ಪರಿಸ್ಥಿತಿ ಗಂಭೀರವಾಗಿದೆ.

Follow us on

Related Stories

Most Read Stories

Click on your DTH Provider to Add TV9 Kannada