
ಜೆಡಿಎಸ್ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವಿಟರ್ನಲ್ಲಿ ಶುಭಕೋರಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ಅವರಿಗೆ ದೇವರು ಆಯುಷ್ಯ, ಆರೋಗ್ಯವನ್ನು ಕರುಣಿಸಿ ಕಾಪಾಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Best wishes to former Karnataka Chief Minister Shri @hd_kumaraswamy Ji on his birthday. May Almighty bless him with a long life, filled with the best health.
— Narendra Modi (@narendramodi) December 16, 2020