West Bengal Violence: ಸತ್ಯಶೋಧನೆಗಾಗಿ ಪಶ್ಚಿಮ ಬಂಗಾಳಕ್ಕೆ ನಾಲ್ವರು ಅಧಿಕಾರಿಗಳ ತಂಡ ಕಳುಹಿಸಿದ ಕೇಂದ್ರ ಸರ್ಕಾರ

West Bengal Elections 2021: ಚುನಾವಣಾ ಫಲಿತಾಂಶದ ನಂತರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರಿದ ಹಿನ್ನೆಲೆಯಲ್ಲಿ, ಹಿಂಸಾಚಾರವನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು ವರದಿಯನ್ನು ಇನ್ನೂ ಏಕೆ ಸ್ವೀಕರಿಸಲಾಗಿಲ್ಲ ಎಂದು ಕೇಳಿದೆ.

West Bengal Violence: ಸತ್ಯಶೋಧನೆಗಾಗಿ ಪಶ್ಚಿಮ ಬಂಗಾಳಕ್ಕೆ ನಾಲ್ವರು ಅಧಿಕಾರಿಗಳ ತಂಡ ಕಳುಹಿಸಿದ ಕೇಂದ್ರ ಸರ್ಕಾರ
ಕೇಂದ್ರ ಗೃಹ ಸಚಿವಾಲಯ ನಿಯೋಜಿಸಿದ ತಂಡ ಕೊಲ್ಕತ್ತಾದಲ್ಲಿ ಬಂದಿಳಿದಾಗ
Follow us
ರಶ್ಮಿ ಕಲ್ಲಕಟ್ಟ
|

Updated on:May 06, 2021 | 1:53 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ನಿಜ ಸಂಗತಿಗಳನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರ ನಾಲ್ವರು ಅಧಿಕಾರಿಗಳ ತಂಡವನ್ನು ಪಶ್ಚಿಮ ಬಂಗಾಳಕ್ಕೆ ಕಳುಹಿಸಿದೆ . ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೇರಿದ ಬೆನ್ನಲ್ಲೇ ಟಿಎಂಸಿ ಮತ್ತು ಬಿಜೆಪಿ ನಡುವೆ ಸಂಘರ್ಷವೇರ್ಪಟ್ಟಿದ್ದು 14 ಮಂದಿ ಸಾವಿಗೀಡಾಗಿದ್ದಾರೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ನಾಲ್ವರು ಅಧಿಕಾರಿಗಳ ತಂಡ ರಚಿಸಿದೆ.

ತಂಡವು ಗುರುವಾರ ಬೆಳಿಗ್ಗೆ ಹೊರಟಿದ್ದು ಶೀಘ್ರದಲ್ಲೇ ಕೋಲ್ಕತ್ತಾದಲ್ಲಿ ತನ್ನ ಕೆಲಸವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ವರದಿಯೊಂದಿಗೆ ಹಿಂತಿರುಗಲು 48 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಡಳಿತ ಮಂಡಳಿಯ ಮುಖ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳನ್ನು ಹೊರತುಪಡಿಸಿ ಪಶ್ಚಿಮ ಬಂಗಾಳದ ಪೊಲೀಸರ ಉನ್ನತ ಅಧಿಕಾರಿಗಳನ್ನು ತಂಡ ಭೇಟಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಭಾನುವಾರದಿಂದ ಹಿಂಸಾಚಾರ ವರದಿಯಾದ ಕೆಲವು ಸ್ಥಳಗಳಿಗೆ ಭೇಟಿ ನೀಡಲಿದೆ ಮತ್ತು ಸಂತ್ರಸ್ತ ಕುಟುಂಬಗಳೊಂದಿಗೆ ಮಾತನಾಡಲಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಫಲಿತಾಂಶದ ನಂತರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರಿದ ಹಿನ್ನೆಲೆಯಲ್ಲಿ, ಹಿಂಸಾಚಾರವನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು ವರದಿಯನ್ನು ಇನ್ನೂ ಏಕೆ ಸ್ವೀಕರಿಸಲಾಗಿಲ್ಲ ಎಂದು ಕೇಳಿದೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾಧ್ಯಾಯ ಅವರಿಗೆ ಮೇ 3 ರ ಪತ್ರವನ್ನು ನೆನಪಿಸುವ ಮೂಲಕ ಈ ಪತ್ರವನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಈ ಪತ್ರವು ಪರಿಸ್ಥಿತಿಯ ಬಗ್ಗೆ ವಿವರವಾದ ವರದಿಯನ್ನು ಕೇಳಿದೆ.

ಇಲ್ಲಿಯವರೆಗೆ ವರದಿ ಸ್ವೀಕೃತವಾಗಿಲ್ಲ, ಮಾಧ್ಯಮ ವರದಿಗಳ ಪ್ರಕಾರ, ಹಿಂಸಾಚಾರ ಮುಂದುವರೆದಿದೆ. ಇದರರ್ಥ ಇಲ್ಲಿಯವರೆಗೆ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಿಂಸಾಚಾರವನ್ನು ತಡೆಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಶ್ಚಿಮ ಬಂಗಾಳವನ್ನು ಕೇಳಲಾಗಿದೆ ಎಂದು ಅವರು ಹೇಳಿದರು. ಪರಿಸ್ಥಿತಿಯ ವರದಿಯನ್ನು ಸ್ವೀಕರಿಸದಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

ಭಾನುವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಜಯಗಳಿಸಿದ ನಂತರ, ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರದ ವರದಿಗಳು ಬಂದಿದ್ದು, ಅನೇಕ ಬಿಜೆಪಿ ಕಚೇರಿಗಳು ಮತ್ತು ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಟಿಎಂಸಿ ನಾಯಕನನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆ ಎಂಬ ವರದಿಗಳೂ ಬಂದಿವೆ. ಇಲ್ಲಿಯವರೆಗೆ 14 ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ಪರಿಸ್ಥಿತಿಯನ್ನು ಅರಿತುಕೊಂಡ ಮಮತಾ ಬ್ಯಾನರ್ಜಿ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಡಿಜಿಪಿ ಪಿ ನಿರಜ್ನಾಯನ್ ಸೇರಿದಂತೆ 30 ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಯಾವುದೇ ರೀತಿಯ ಹಿಂಸಾಚಾರವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಡಿಜಿಪಿ ನಿರಜ್ನಾಯನ್ (ಡಿಜಿ, ಅಗ್ನಿಶಾಮಕ ಸೇವೆಗಳಾಗಿ ಸರಿಸಲಾಗಿದೆ) ಮತ್ತು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಜಗ್ಮೋಹನ್ (ಈಗ ಡಿಜಿ, ನಾಗರಿಕ ರಕ್ಷಣಾ) ಸೇರಿದಂತೆ ಬುಧವಾರ 29 ಐಪಿಎಸ್ ,ಒಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚುನಾವಣೆಯ ಹೊತ್ತಲ್ಲಿ ಚುನಾವಣಾ ಆಯೋಗ ವರ್ಗಾವಣೆ ಮಾಡಿದ್ದ ಡಿಜಿಪಿ ವಿರೇಂದ್ರ ಮತ್ತು ಜಾವೇದ್ ಶಮೀಮ್ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಅವರನ್ನು ಮಮತಾ ವಾಪಸ್ ಕರೆದುಕೊಂಡಿದ್ದಾರೆ. ಬಂಗಾಳವು ಅಶಾಂತಿಯನ್ನು ಸಹಿಸುವುದಿಲ್ಲ ಇಂದಿನಿಂದ ನಾನು ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: West Bengal Violence: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ- ಬಿಜೆಪಿ ನಡುವೆ ಸಂಘರ್ಷ; ಮನೆಗಳು ಧ್ವಂಸ, ಹಲವಾರು ಮಂದಿ ಸಾವು

(Postpoll violence in West Bengal four member team deputed by the Ministry of Home Affairs reached Kolkata for fact finding)

Published On - 1:46 pm, Thu, 6 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್