
ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ.
ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಹೇಳಿಕೆಗಳ ಬಗ್ಗೆ ಅವರ ಪಾರ್ಟಿಯಲ್ಲೇ ನಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.