ಕೊವಿಡ್ ಟೆಸ್ಟ್ ಕಡ್ಡಾಯ, ಗರ್ಭಿಣಿಯರ ಪರದಾಟ

ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರು ಬಂದಿದ್ದಾರೆ. ಮಧ್ಯಾಹ್ನ 1 ಗಂಟೆಯಾದರೂ ಕೊರೊನಾ ಟೆಸ್ಟ್​ ಮಾಡಿಲ್ಲ. ಕೂರಲೂ‌ ವ್ಯವಸ್ಥೆಯಿಲ್ಲದೆ,  ತಿಂಡಿಯೂ ತಿನ್ನದೆ ತುಂಬು ಗರ್ಭಿಣಿ ಮಹಿಳೆಯರು ಕಂಗಾಲಾಗಿದ್ದಾರೆ. ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸುವ ಟ್ರೂನೆಟ್ ಟ್ಯೂಬ್ ಸರಿಯಾಗಿ ಸರಬರಾಜಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಪಟ್ಟ […]

ಕೊವಿಡ್ ಟೆಸ್ಟ್ ಕಡ್ಡಾಯ, ಗರ್ಭಿಣಿಯರ ಪರದಾಟ
ಸಾಧು ಶ್ರೀನಾಥ್​ Edited By:

Updated on: Jul 03, 2020 | 5:48 PM

ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ.

ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರು ಬಂದಿದ್ದಾರೆ. ಮಧ್ಯಾಹ್ನ 1 ಗಂಟೆಯಾದರೂ ಕೊರೊನಾ ಟೆಸ್ಟ್​ ಮಾಡಿಲ್ಲ. ಕೂರಲೂ‌ ವ್ಯವಸ್ಥೆಯಿಲ್ಲದೆ,  ತಿಂಡಿಯೂ ತಿನ್ನದೆ ತುಂಬು ಗರ್ಭಿಣಿ ಮಹಿಳೆಯರು ಕಂಗಾಲಾಗಿದ್ದಾರೆ.

ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸುವ ಟ್ರೂನೆಟ್ ಟ್ಯೂಬ್ ಸರಿಯಾಗಿ ಸರಬರಾಜಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗರ್ಭಿಣಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 5:45 pm, Fri, 3 July 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us