AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಗಲ್ಲಿ ಗಲ್ಲಿಯಲ್ಲೂ ವಿಜೃಂಭಿಸುತ್ತಿದೆ ಪೈಪುಗಳು-ನಾಟಾಗಳು: ಸೀಲ್‌ಡೌನ್‌ ಆಯ್ತು ಆನಂದಪುರಂ

ಬೆಂಗಳೂರು: ನಗರದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಲಾಕ್​ಡೌನ್ ಸಡಲಿಕೆ ಮಾಡಿದ ನಂತರ ಸೋಂಕು ಮತ್ತಷ್ಟು ಬಲಿಶಾಲಿಯಾಗಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಇದನ್ನು ನಿಯಂತ್ರಣಕ್ಕೆ ತರಲು ಬಿಬಿಎಂಪಿ ಸೀಲ್​ಡೌನ್ ಸೂತ್ರ ಮುಂದುವರೆಸಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಾಗೂ ಕೊವಿಡ್​ನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆನಂದಪುರಂ ಸ್ಲಂ ಸೀಲ್‌ಡೌನ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಿಬಿಎಂಪಿ ಸಿಬ್ಬಂದಿ ಕಬ್ಬಿಣದ ಹಲಗೆ ಮತ್ತು ಬ್ಯಾರಿಕೇಡ್‌ಗಳನ್ನ ತಂದು ಸ್ಲಂನ ಮುಖ್ಯದ್ವಾರ ಸೀಲ್‌ಡೌನ್ ಮಾಡಲು ಮುಂದಾಗಿದ್ದಾರೆ. ಸ್ಲಂ ನಲ್ಲಿ ಇದುವರೆಗೆ […]

ಮತ್ತೆ ಗಲ್ಲಿ ಗಲ್ಲಿಯಲ್ಲೂ ವಿಜೃಂಭಿಸುತ್ತಿದೆ ಪೈಪುಗಳು-ನಾಟಾಗಳು: ಸೀಲ್‌ಡೌನ್‌ ಆಯ್ತು ಆನಂದಪುರಂ
ಆಯೇಷಾ ಬಾನು
|

Updated on:Jun 22, 2020 | 11:13 AM

Share

ಬೆಂಗಳೂರು: ನಗರದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಲಾಕ್​ಡೌನ್ ಸಡಲಿಕೆ ಮಾಡಿದ ನಂತರ ಸೋಂಕು ಮತ್ತಷ್ಟು ಬಲಿಶಾಲಿಯಾಗಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಇದನ್ನು ನಿಯಂತ್ರಣಕ್ಕೆ ತರಲು ಬಿಬಿಎಂಪಿ ಸೀಲ್​ಡೌನ್ ಸೂತ್ರ ಮುಂದುವರೆಸಿದೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಾಗೂ ಕೊವಿಡ್​ನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆನಂದಪುರಂ ಸ್ಲಂ ಸೀಲ್‌ಡೌನ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಬಿಬಿಎಂಪಿ ಸಿಬ್ಬಂದಿ ಕಬ್ಬಿಣದ ಹಲಗೆ ಮತ್ತು ಬ್ಯಾರಿಕೇಡ್‌ಗಳನ್ನ ತಂದು ಸ್ಲಂನ ಮುಖ್ಯದ್ವಾರ ಸೀಲ್‌ಡೌನ್ ಮಾಡಲು ಮುಂದಾಗಿದ್ದಾರೆ. ಸ್ಲಂ ನಲ್ಲಿ ಇದುವರೆಗೆ 6 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, 6 ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಇನ್ನು ಇಲ್ಲಿ 700 ಮನೆಗಳಿದ್ದು, 4 ಸಾವಿರ ಜನ ಸಂಖ್ಯೆ ಇದೆ. ಎಲ್ಲರನ್ನೂ ರ್ಯಾಂಡಮ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸಿಎಂ ಜೊತೆ ಸಭೆ ನಡೆಸಲಿದ್ದಾರೆ. 10ಕ್ಕೂ ಹೆಚ್ಚು ಏರಿಯಾಗಳನ್ನು ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.

Published On - 10:59 am, Mon, 22 June 20

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್