ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಸುದ್ದಿ ಹುಟ್ಟಿದ್ದು ಹೇಗೆ?

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಸುದ್ದಿ ಮಾರ್ಚ್ 6ನೇ ತಾರೀಕಿನಿಂದ ಹರಿದಾಡುವುದಕ್ಕೆ ಆರಂಭವಾದದ್ದು ಏಕೆ ಎಂಬುದಕ್ಕೆ ಈ ವರದಿಯಲ್ಲಿ ಉತ್ತರ ಇದೆ.

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಸುದ್ದಿ ಹುಟ್ಟಿದ್ದು ಹೇಗೆ?
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ
Follow us
|

Updated on:Mar 07, 2021 | 12:38 PM

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರು ಅನಾರೋಗ್ಯದ ಕಾರಣಕ್ಕಾಗಿ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಗೆ ಆಲೋಚನೆ ಮಾಡಿದ್ದರು ಎಂಬ ಪ್ರಕಟಣೆಯೊಂದು ಇದೀಗ ಸಂಸದರು ರಾಜಕೀಯ ನಿವೃತ್ತಿ ಪಡೆದೇ ಬಿಡುತ್ತಾರೆ ಎಂಬ ಸುದ್ದಿ ಆಗುವಂತೆ ಮಾಡಿದೆ. ಆದರೆ ಆ ಪ್ರಕಟಣೆಯಲ್ಲಿ, ಕಾಲು- ಬೆನ್ನು ನೋವು ತೀವ್ರವಾಗಿರುವುದರಿಂದ ಸಾರ್ವಜನಿಕ ಕಾರ್ಯಕ್ರಮಗಳಿಂದ ಸಂಸದರು ದೂರವಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಅವರ ಆಪ್ತಸಹಾಯಕ ಸ್ಪಷ್ಟನೆ ನೀಡಿದ್ದಾರೆ, ಅಷ್ಟೇ.

ಮಾಧ್ಯಮಗಳಿಗೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ ಅವರು ಬಿಡುಗಡೆ ಮಾಡಿದ ಯಥಾವತ್ ಒಕ್ಕಣೆ ಹೀಗಿದೆ:

ಮಾನ್ಯರೇ, ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಅದಾಗ್ಯೂ ಕಳೆದ ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು. ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಙರು ತಕ್ಷಣವೇ ಸೂಕ್ತ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಮಾನ್ಯ ಸಂಸದರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗೂ ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವವರೆಗೆ ಕೆಲ ಕಾಲ ಮಾನ್ಯ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಧನ್ಯವಾದಗಳೊಂದಿಗೆ, ಸುರೇಶ ಶೆಟ್ಟಿ

ಈ ವಿಚಾರ ಮಾಧ್ಯಮಗಳ ಕೈ ತಲುಪುತ್ತಿದ್ದಂತೆ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ ಪಡೆಯುತ್ತಾರಂತೆ ಎಂಬ ಸುದ್ದಿಯಾಗಿದೆ. ಇಲ್ಲಿರುವ ಒಕ್ಕಣೆಯ ಪ್ರಕಾರ, ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿಲ್ಲ ಎಂದು ಇದೆಯೇ ವಿನಾ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದೇನೂ ಇಲ್ಲ. ರಾಜಕೀಯ ನಿವೃತ್ತಿ ಪಡೆಯುವುದಕ್ಕೆ ಈ ಹಿಂದೆ ಆಲೋಚನೆ ಮಾಡಿದ್ದರು ಎಂದಷ್ಟೇ ಇದೆ.

ಅನಂತಕುಮಾರ್ ಹೆಗಡೆ ಪರಿಚಯ: ಅನಂತಕುಮಾರ್ ಹೆಗಡೆ ಜನಿಸಿದ್ದು ಉತ್ತರ ಕನ್ನಡದ ಶಿರಸಿಯಲ್ಲಿ, ಮೇ 20, 1968ರಲ್ಲಿ. ಅವರಿಗೆ ಈಗ 52 ವರ್ಷ ವಯಸ್ಸು. 1996ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಉತ್ತರಕನ್ನಡ ಕ್ಷೇತ್ರದಿಂದ ಆಯ್ಕೆಯಾದರು. ಆನಂತರ 1998ರಲ್ಲಿ ಪುನರಾಯ್ಕೆಯಾದರು. 1999ರ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್​ನ ಮಾರ್ಗರೇಟ್ ಆಳ್ವಾ ಅವರಿಂದ ಸೋಲನುಭವಿಸಿದರು. ಇದಾದ ಮೇಲೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆ ಆಗಿದ್ದಾರೆ. 2017ರ ಸೆಪ್ಟೆಂಬರ್​​ನಿಂದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಖಾತೆ ಸಚಿವರಾಗಿದ್ದರು. ಅಂದ ಹಾಗೆ ಹೆಗಡೆ ಅವರು ಕದಂಬ ಎಂಬ ಸಂಘಟನೆ ಆರಂಭಿಸಿದ್ದು, ಹಲವು ಸಾಮಾಜಿಕ ಆರ್ಥಿಕ ಚಟುವಟಿಕೆಗಳಲ್ಲಿ ಆ ಸಂಘಟನೆಯು ತೊಡಗಿಕೊಂಡಿದೆ.

ಸಾಲು ಸಾಲು ವಿವಾದ: ಅನಂತಕುಮಾರ ಹೆಗಡೆ ವಿರುದ್ಧ ಆರೋಪಗಳು ಹಾಗೂ ವಿವಾದಗಳು ಸಾಕಷ್ಟಿವೆ. 2017ರ ಜನವರಿಯಲ್ಲಿ ತಮ್ಮ ತಾಯಿ ಸರಿಯಾದ ಚಿಕಿತ್ಸೆ ದೊರೆಯಲಿಲ್ಲ ಎಂದು ಆರೋಪಿಸಿ, ವೈದ್ಯರ ಮೇಲೆ ಹಲ್ಲೆ ಮಾಡಿದ್ದು ಸಿ.ಸಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು 2018ರಲ್ಲಿ, ಸಂವಿಧಾನದಲ್ಲಿ ಇರುವ ಜಾತ್ಯತೀತ ಎಂಬ ಪದವನ್ನು ಬಿಜೆಪಿಯಿಂದ ಬದಲಾಯಿಸಲಾಗುವುದು. ನಾವು ಅಧಿಕಾರಕ್ಕೆ ಬಂದಿರುವುದು ಅದಕ್ಕೇ ಎಂಬ ಹೇಳಿಕೆ ನೀಡಿದ್ದು ವಿವಾದವಾಗಿತ್ತು. 2019ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್​ನಲ್ಲಿ ಮಾತ್ರ ಕಾಣಸಿಗುವಂಥ ಹೈಬ್ರಿಡ್ ಪ್ರಾಡಕ್ಟ್ ಎಂದು ಹೀಗಳೆದಿದ್ದರು. 2020ರ ಫೆಬ್ರವರಿಯಲ್ಲಿ, ಮಹಾತ್ಮ ಗಾಂಧಿ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ನಾಟಕ ಹಾಗೂ ಗಾಂಧಿಯಂಥ ವ್ಯಕ್ತಿಯನ್ನು ಮಹಾತ್ಮ ಎಂದು ಕರೆಯಲು ಹೇಗೆ ಸಾಧ್ಯ? ಭಾರತದಲ್ಲಿನ ಸ್ವಾತಂತ್ರ್ಯ ಚಳವಳಿ ನಡೆದಿದ್ದು ಬ್ರಿಟಿಷರ ಸಹಮತಿ ಹಾಗೂ ಬೆಂಬಲದೊಂದಿಗೆ ಎನ್ನುವ ಮೂಲಕ ಕಿಡಿ ಹೊತ್ತಿಸಿದ್ದರು.

ಇಷ್ಟೇ ಅಲ್ಲ, ಇನ್ನೂ ಸಾಕಷ್ಟು ವಿವಾದಗಳು ಅವರ ಮೇಲೆ ಇದೆ. ಆದರೆ ಬಿಜೆಪಿ ವಲಯದೊಳಗೆ “ಹಿಂದೂ ಫೈರ್ ಬ್ರ್ಯಾಂಡ್” ಎಂಬ ಹಣೆಪಟ್ಟಿ ಅವರ ಪಾಲಿಗಿದೆ. ವೈಯಕ್ತಿಕ ಬದುಕಿನ ಬಗ್ಗೆ ಹೇಳುವುದಾದರೆ ಅನಂತಕುಮಾರ್ ಹೆಗಡೆ ತಂದೆ ಹೆಸರು ದತ್ತಾತ್ರೇಯ ಹೆಗಡೆ, ತಾಯಿ ಶ್ರೀರೂಪಾ ಹೆಗಡೆ. ಹನ್ನೆರಡನೇ ತರಗತಿ (ಸೆಕೆಂಡ್ ಪಿಯುಸಿ) ತನಕ ವ್ಯಾಸಂಗ ಮಾಡಿರುವ ಅನಂತಕುಮಾರ್ ಹೆಗಡೆಗೆ ಪತ್ನಿ, ಒಬ್ಬ ಮಗ ಹಾಗೂ ಮಗಳು ಇದ್ದಾರೆ.

ಇದನ್ನೂ ಓದಿ: ಗಾಂಧಿ ವಿರೋಧಿ ಹೇಳಿಕೆ: ಸ್ಪಷ್ಟನೆ ನೀಡುವಂತೆ ಸ್ವಪಕ್ಷದಿಂದಲೇ ಹೆಗಡೆಗೆ ನೋಟಿಸ್

Published On - 12:27 pm, Sun, 7 March 21

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ