AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ

ರಾಮನಗರ: ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ವಿತರಿಸುವ ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಯಡಿ ಜಿಲ್ಲೆಯ ಫಲಾನುಭವಿಗಳು ಸೇರಿದಂತೆ ದೇಶದ ಆರು ರಾಜ್ಯಗಳಲ್ಲಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು. ಪ್ರಧಾನಿ ಮೋದಿ ಒಟ್ಟು 763 ಗ್ರಾಮಗಳ ಫಲಾನುಭವಿಗಳಿಗೆ ತಮ್ಮ ತಮ್ಮ ಮೊಬೈಲ್ ಫೋನ್​ಗಳಿಗೆ ಆಸ್ತಿ ಕಾರ್ಡ್​ನ ಡೌನ್​ಲೋಡ್ ಲಿಂಕ್ ಕಳುಹಿಸುವ ಮೂಲಕ ವಿತರಿಸಿದರು. ಇದೇ ವೇಳೆ ರಾಮನಗರ ತಾಲ್ಲೂಕಿನ MGಪಾಳ್ಯ, ಮಜರೆ ಸೀಬಕಟ್ಟೆ […]

ಪ್ರಧಾನಿ ಮೋದಿಯಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ
KUSHAL V
|

Updated on: Oct 11, 2020 | 6:01 PM

Share

ರಾಮನಗರ: ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ವಿತರಿಸುವ ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಯಡಿ ಜಿಲ್ಲೆಯ ಫಲಾನುಭವಿಗಳು ಸೇರಿದಂತೆ ದೇಶದ ಆರು ರಾಜ್ಯಗಳಲ್ಲಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು.

ಪ್ರಧಾನಿ ಮೋದಿ ಒಟ್ಟು 763 ಗ್ರಾಮಗಳ ಫಲಾನುಭವಿಗಳಿಗೆ ತಮ್ಮ ತಮ್ಮ ಮೊಬೈಲ್ ಫೋನ್​ಗಳಿಗೆ ಆಸ್ತಿ ಕಾರ್ಡ್​ನ ಡೌನ್​ಲೋಡ್ ಲಿಂಕ್ ಕಳುಹಿಸುವ ಮೂಲಕ ವಿತರಿಸಿದರು. ಇದೇ ವೇಳೆ ರಾಮನಗರ ತಾಲ್ಲೂಕಿನ MGಪಾಳ್ಯ, ಮಜರೆ ಸೀಬಕಟ್ಟೆ ಹಾಗೂ ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯದ ಗ್ರಾಮಗಳಲ್ಲಿನ 157 ಫಲಾನುಭವಿಗಳು ಸಹ ತಮ್ಮ ಮೊಬೈಲ್​ನಲ್ಲಿ ಡೌನ್​ಲೋಡ್​ ಲಿಂಕ್ ಸ್ವೀಕರಿಸಿದರು. ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ಪ್ರಧಾನಿ ಮೋದಿ ಕಳೆದ ಏಪ್ರಿಲ್ 24 ರಂದು ದೇಶಾದ್ಯಂತ ಚಾಲನೆ ನೀಡಿದ್ದರು. ದೇಶದಲ್ಲಿ ಪ್ರಾಯೋಗಿಕವಾಗಿ ಆರು ರಾಜ್ಯಗಳಲ್ಲಿ ಜಾರಿಗೆ ತಂದ ಈ ಯೋಜನೆಯಲ್ಲಿ ಕರ್ನಾಟಕದಿಂದ ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಲಾಗಿತ್ತು. ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಜಿಲ್ಲೆಯ 4 ಗ್ರಾಮಗಳಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಇಲ್ಲಿಯ ಜಿಲ್ಲಾ ಪಂಚಾಯಿತಿ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ಅಡ್ಡಿಯಾದ ನೀತಿ ಸಂಹಿತೆ ಪ್ರಧಾನಿ ಮೋದಿ ಆಸ್ತಿ ಕಾರ್ಡ್​ಗಳನ್ನು ವಿತರಿಸಿದ ಬಳಿಕ 6 ರಾಜ್ಯಗಳ ಆಯ್ದ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪೂರ್ವನಿಗದಿಯಾದಂತೆ ಜಿಲ್ಲೆಯಿಂದ ಶ್ರೀಮತಿ ಮಂಜುಳಾ ಪ್ರಧಾನಿ ಜೊತೆ ಸಂವಾದ ನಡೆಸಬೇಕಾಗಿತ್ತು. ಆದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಮನಗರ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ, ಪ್ರಧಾನಿ ಮಂಜುಳಾರೊಂದಿಗೆ ಸಂವಾದ ನಡೆಸಲಿಲ್ಲ.

ಆಸ್ತಿ ಕಾರ್ಡ್ ವಿತರಣೆ ಪ್ರಧಾನಿ ಮೋದಿಯವರ ಕಾರ್ಯಕ್ರಮದ ನಂತರ ರಾಮನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಜಿಲ್ಲಾ ಪಂಚಾಯಿತಿಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾಂಕೇತಿಕವಾಗಿ 4 ಗ್ರಾಮಗಳ ಫಲಾನುಭವಿಗಳಿಗೆ ಆಸ್ತಿ ಕಾರ್ಡ್​ಗಳನ್ನು ವಿತರಿಸಿದರು. ಭೂ ದಾಖಲೆಗಳ ಉಪನಿರ್ದೇಶಕ ಬಿ.ಜಿ. ಉಮೇಶರ ಮಾರ್ಗದರ್ಶನದಲ್ಲಿ ಇನ್ನುಳಿದ ಎಲ್ಲಾ ಫಲಾನುಭವಿಗಳಿಗೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಭೌತಿಕವಾಗಿ ಆಸ್ತಿ ಕಾರ್ಡ್​ಗಳನ್ನು ವಿತರಿಸಿದರು.

ಈ ಯೋಜನೆಯನ್ನು ಕೇಂದ್ರ ಸರ್ಕಾರವು ಸರ್ವೆ ಆಫ್ ಇಂಡಿಯಾ ಸಂಸ್ಥೆಯ ನೆರವಿನೊಂದಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿದೆ. ಜಿಲ್ಲೆಯಲ್ಲಿ ಇದುವರೆವಿಗೆ 67 ಗ್ರಾಮಗಳ 24,804 ಆಸ್ತಿಗಳ ಗಡಿಗಳನ್ನು ಗುರುತಿಸಿ ಡ್ರೋಣ್ ಮೂಲಕ ನಕ್ಷೆ ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಪ್ರಗತಿಯಲ್ಲಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ತಿಳಿಸಿದರು.

ಅಕ್ರಮಕ್ಕೆ ತಡೆ ಸ್ವಾಮಿತ್ವ ಯೋಜನೆ ಪ್ರತಿಯೊಂದು ಆಸ್ತಿಗೆ ಕಟ್ಟಬೇಕಾದ ತೆರಿಗೆಯನ್ನು ಸ್ಪಷ್ಟವಾಗಿ ಮತ್ತು ವೈಜ್ಞಾನಿಕವಾಗಿ ನಿರ್ಧರಿಸಲು ಸಹಾಯ ಮಾಡುತ್ತದೆ. ಇದರಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ನೆರವಾಗುತ್ತದೆ. ಜೊತೆಗೆ, ಆಸ್ತಿಯ ಮಾಲೀಕರು ಪರಸ್ಪರ ವಿವಾದಗಳಿಲ್ಲದೆ ಆಸ್ತಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಹಕಾರಿಯಾಗುತ್ತದೆ. ಕಟ್ಟಡ ಪರವಾನಗಿಯನ್ನು ಪಡೆಯುವ ಪ್ರಕ್ರಿಯೆ ಸರಳವಾಗುತ್ತದೆ ಮತ್ತು ಸರ್ಕಾರಿ ಆಸ್ತಿಯಲ್ಲಿನ ಅಕ್ರಮ ಸ್ವಾಧೀನವನ್ನು ತೆರವುಗೊಳಿಸಬಹುದಾಗಿರುತ್ತದೆ ಎಂದು ಇಕ್ರಂ ಅವರು ಯೋಜನೆಯಿಂದಾಗುವ ಪ್ರಯೋಜನಗಳನ್ನು ವಿವರಿಸಿದರು.

ಯೋಜನೆ ಉದ್ದೇಶ ‘ಸ್ವಾಮಿತ್ವ’ (SVAMITVA -Survey of vilages and mapping with improvised technology in village areas) ಯೋಜನೆಯಡಿ ಗ್ರಾಮೀಣ ವಸತಿ ಪ್ರದೇಶಗಳಲ್ಲಿರುವ ಆಸ್ತಿಯ ಗಡಿಗಳನ್ನು ಡ್ರೋಣ್ ಕ್ಯಾಮರಾ ಬಳಸಿಕೊಂಡು ಭೂಮಾಪನ ಮಾಡಿಸಿ ಆಸ್ತಿ ಮಾಲೀಕರಿಗೆ ನಕ್ಷೆ ಸಹಿತ ಆಸ್ತಿ ಕಾರ್ಡುಗಳನ್ನು (Property Card) ವಿತರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಾಲೀಕರ ಹೆಸರು, ಆಸ್ತಿಯ ವಿಸ್ತೀರ್ಣ, ಕಟ್ಟಡದ ವಿಸ್ತೀರ್ಣ, ಆಸ್ತಿಯ ಚೆಕ್ಕುಬಂದಿ ವಿವರ, ಆಸ್ತಿಯ ಮೇಲೆ ಋಣಭಾರಗಳು ಇದ್ದಲ್ಲಿ ಅದರ ವಿವರ ಮತ್ತು ಸವಿವರವಾದ ನಕ್ಷೆಯ ವಿವರಗಳನ್ನು ಆಸ್ತಿ ಕಾರ್ಡು ಹೊಂದಿರುತ್ತದೆ.

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು