ಮಡಿವಾಳ ಪೆಟ್ರೋಲ್ ಬಂಕ್ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!
ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ […]
ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ.
ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ ಖಾಸಗಿ ಬಸ್‌ನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ.
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮ ವಹಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ, ಬೆಂಕಿ ಹರಡದಂತೆ ಎಚ್ಚರ ವಹಿಸಿದ್ದಾರೆ. ಬಸ್‌ನಲ್ಲಿ ಒಟ್ಟು 34 ಜನ ಪ್ರಯಾಣಿಕರಿದ್ದರು. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:30 am, Thu, 30 January 20