AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೌ ಟು ಡೈ ಈಸಿಲಿ’ ಎಂದು ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಖಾಸಗಿ ಕಂಪನಿ ಟೀಂ ಲೀಡರ್

ಮಾರ್ಚ್ 13ಎಂದು ಖಾಸಗಿ ಕಂಪನಿಯ ಉದ್ಯೋಗಿ ಜೀವನ್ ಅಂಬಾಟೆ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 'ಹೌ ಟು ಡೈ ಈಸಿಲಿ', ಎಂದು ಸುಲಭವಾಗಿ ಸಾಯುವ ಬಗ್ಗೆ ಯುಟ್ಯೂಬ್‌ನಲ್ಲಿ‌ ಹುಡುಕಾಡಿದ್ದ ಜೀವನ್​ಗೆ ಗ್ಯಾಸ್ ಸಿಲಿಂಡರ್​ನಲ್ಲಿ ಬರುವ ಮೊನಾಕ್ಸೈಡ್ ಮೂಲಕ ಸುಲಭವಾಗಿ ಸಾಯಬಹುದು ಎಂದು ಗೊತ್ತಾಗಿದೆ.

'ಹೌ ಟು ಡೈ ಈಸಿಲಿ' ಎಂದು ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಖಾಸಗಿ ಕಂಪನಿ ಟೀಂ ಲೀಡರ್
ಜೀವನ್ ಅಂಬಾಟೆ
Follow us
ಆಯೇಷಾ ಬಾನು
|

Updated on: Mar 22, 2021 | 7:37 AM

ಬೆಂಗಳೂರು: ಸಿಲಿಕಾನ್ ಸಿಟಿಯ ಖಾಸಗಿ ಕಂಪನಿ ‘ಟೀಂ ಲೀಡರ್ ’ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಹದೇವಪುರದಲ್ಲಿ ಮಾರ್ಚ್ 13ರಂದು ಈ ಘಟನೆ ನಡೆದಿದೆ. ಬೀದರ್ ಮೂಲದ ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಇಂಟರ್​ನೆಟ್​ನಲ್ಲಿ ಸರ್ಚ್ ಮಾಡಿ ಸೂಸೈಡ್ ಮಾಡಿಕೊಂಡ ಮಾರ್ಚ್ 13ಎಂದು ಖಾಸಗಿ ಕಂಪನಿಯ ಉದ್ಯೋಗಿ ಜೀವನ್ ಅಂಬಾಟೆ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಹೌ ಟು ಡೈ ಈಸಿಲಿ’, ಎಂದು ಸುಲಭವಾಗಿ ಸಾಯುವ ಬಗ್ಗೆ ಯುಟ್ಯೂಬ್‌ನಲ್ಲಿ‌ ಹುಡುಕಾಡಿದ್ದ ಜೀವನ್​ಗೆ ಗ್ಯಾಸ್ ಸಿಲಿಂಡರ್​ನಲ್ಲಿ ಬರುವ ಮೊನಾಕ್ಸೈಡ್ ಮೂಲಕ ಸುಲಭವಾಗಿ ಸಾಯಬಹುದು ಎಂದು ಗೊತ್ತಾಗಿದೆ. ಹೀಗಾಗಿ ಮುಖಕ್ಕೆ ಮಾಸ್ಕ್ ಧರಿಸಿ ಸಿಲಿಂಡರ್ ಪೈಪ್​ನ ಮೂಗಿಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇಹದ ಒಳಗೆ ಮೊನಾಕ್ಸೈಡ್ ಹೋಗಿ ಕೂತಲ್ಲೇ ಜೀವನ್ ಪ್ರಾಣ ಕಳೆದುಕೊಂಡಿದ್ದಾನೆ.

ಮನೆ ಬಾಗಿಲಿಗೆ ಡೈಯಾಗ್ರಾಮ್ ಅಂಟಿಸಿದ್ದ ಯುವಕ ಇನ್ನು ಆತ್ಮಹತ್ಯೆಗೂ ಮೊದಲು ಜೀವನ್ ತನ್ನ ಮನೆ ಬಾಗಿಲಿಗೆ ಪೋಸ್ಟ್ ಅಂಟಿಸಿದ್ದ. ಗ್ಯಾಸ್ ಸಿಲಿಂಡರ್ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ಜೀವನ್, ತನ್ನ ಸಾವಿನ ನಂತರ ಮನೆಗೆ ಬರುವ ಮಂದಿಗೆ ಯಾವುದೇ ಪ್ರಾಣಾಪಾಯವಾಗಬಾರದೆಂದು ಚಿಂತಿಸಿ ಮನೆಗೆ ಬರುವ ಜನರು ಏನೆಲ್ಲ ಮಾಡಬೇಕೆಂದು ತನ್ನ ಮನೆ ಬಾಗಿಲಿಗೆ ಡೈಯಾಗ್ರಾಮ್ ಅಂಟಿಸಿದ್ದ. ಮನೆ ಬಾಗಿಲು ಓಪನ್ ಮಾಡಿದ ತಕ್ಷಣ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್‌ ಮಾಡಬೇಡಿ ಎಂದು ಬರೆದಿದ್ದ. ಆತ್ಮಹತ್ಯೆ ಮಾಡಿಕೊಂಡ 3 ದಿನದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಜೀವನ್ ಫೋನ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ನೇಹಿತರು ಜೀವನ್ ಮನೆ ಬಳಿ ಬಂದು ನೋಡಿದಾಗ ಅನಾಹುತ ಬಯಲಾಗಿದೆ. ಡೆತ್‌ನೋಟ್ ಬರೆದಿಟ್ಟು ಜೀವನ್ ಆತ್ಮಹತ್ಯೆಗೆ ಶರಣಾಗಿದ್ದ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನ್ ಬರೆದ ಡೆತ್‌ನೋಟ್​ನಲ್ಲೇನಿದೆ? ಮನೆಯವರು ನನಗೆ ಫೋನ್ ಮಾಡ್ತಿಲ್ಲ, ನನ್ನ ಬಗ್ಗೆ ಕೇರ್ ಮಾಡ್ತಿಲ್ಲ, ಲೈಫ್ ಬ್ಯೂಟಿಫುಲ್‌ ಆಗಿರಬೇಕು ಅಂತಾ ಬೀದರ್​ನಿಂದ ಬೆಂಗಳೂರಿಗೆ ಬಂದೆ. ಆದ್ರೆ ಇಲ್ಲಿ ನಾನು ಅನ್ಕೊಂಡ ಹಾಗೇ ಏನು ನಡೀತಿಲ್ಲ. ಲೈಪು ಬೋರಾಗಿದೆ ಅಂತಾ ಜೀವನ್ ಡೆತ್‌ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಮೊಬೈಲ್​ನಲ್ಲಿ ಹೆಚ್ಚು ಮಾತನಾಡಬೇಡ ಎಂದು ಹೇಳಿದ್ದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣವಾಯ್ತಾ?

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ