ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದಲ್ಲಿ ಖಾಸಗಿ ಸುದ್ದಿವಾಹಿನಿಯ ಮಾಲೀಕ ಹಾಗು ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್, ಜಾನ್ ಕೆನಡಿ, ನರ್ಮಲ್ ಬಾಬು ಸೇರಿ ನಾಲ್ವರನ್ನು ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಆಧರಿಸಿ ಬೆನ್ನತ್ತಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ತಮ್ಮ ಖಾಸಗಿ ಚಾನಲ್ ಕಚೇರಿಗೆ ಕರೆಸಿ ಹಣ ವಸೂಲಿ ಮಾಡುತ್ತಿದ್ದರಂತೆ. ಬಂಧಿತರ ಬಳಿ ಹಲವು ಅಧಿಕಾರಿಗಳ ಹನಿಟ್ರ್ಯಾಪ್ ವಿಡಿಯೋ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಶಕ್ಕೆ ಪಡೆಯುವ ವೇಳೆ ಮೊಬೈಲ್ ಡೇಟಾ ಡಿಲೀಟ್ ಮಾಡಲಾಗಿದೆಯಂತೆ ಹೀಗಾಗಿ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದು ರಿಟ್ರೈವ್ ಗೆ ಪೊಲೀಸರು ಮುಂದಾಗಿದ್ದಾರೆ.
ಅಶ್ಲೀಲ ವಿಡಿಯೋ ಕರೆ ಮಾಡಿ.. ಇನ್ಸ್ಪೆಕ್ಟರ್ಗೆ ಬ್ಲ್ಯಾಕ್ಮೇಲ್ ಮಾಡಿದ ಅಪರಿಚಿತ ಯುವತಿ
ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..