Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyank Kharge: ಮೂರನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿದ ಪ್ರಿಯಾಂಕ್ ಖರ್ಗೆ; ರಾಜಕೀಯ ಜೀವನ ಹೀಗಿತ್ತು

ರಾಜ್ಯಸಭಾ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರು ನಡೆದು ಬಂದ ಹಾದಿ, ರಾಜಕೀಯ ಜೀವನ, ಶಿಕ್ಷಣ ಕುರಿತು ಇಲ್ಲಿದೆ ಮಾಹಿತಿ.

Priyank Kharge: ಮೂರನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿದ ಪ್ರಿಯಾಂಕ್ ಖರ್ಗೆ; ರಾಜಕೀಯ ಜೀವನ ಹೀಗಿತ್ತು
ಪ್ರಿಯಾಂಕಾ ಖರ್ಗೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 20, 2023 | 1:05 PM

ಕಲಬುರಗಿ: ರಾಜ್ಯಸಭಾ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಎಂ. ಖರ್ಗೆ (Priyank Kharge) ಅವರು 1978 ನವೆಂಬರ್ 22 ರಂದು ಬೆಂಗಳೂರಿನಲ್ಲಿ ಜನಿಸುತ್ತಾರೆ. ಬಿಎ ಪದವೀಧರರಾದ ಪ್ರಿಯಾಂಕ್ ಖರ್ಗೆ ಡಿಪ್ಲೋಮಾ ಇನ್ ಗ್ರಾಫಿಕ್ಸ್ ಮತ್ತು ‌ಎನಿಮೇಷನ್ ವ್ಯಾಸಂಗ ಮಾಡಿದ್ದಾರೆ. ಈ ಮೂಲಕ ದೇಶ ಹಾಗೂ ವಿದೇಶ ಕಾರ್ಪೋರೇಟ್ ಕಂಪನಿಗಳಲ್ಲಿ ಕೆಲಸ ಕೂಡ ಮಾಡಿದ್ದಾರೆ. ಇದೀಗ ಕಲಬುರಗಿಯಲ್ಲಿ ನೆಲೆಸಿರುವ ಇವರು ಈ ಹಿಂದೆ ತಂದೆ ಸ್ಪರ್ಧಿಸುತ್ತಿದ್ದ ಕ್ಷೇತ್ರದಿಂದ ಕಣಕ್ಕೆ ಇಳಿದು ಗೆಲುವು ಸಾಧಿಸಿದರು. ಬಳಿಕ ಎರಡು ಬಾರಿ ಸಚಿವರಾಗಿ ಕೆಲಸ ಮಾಡಿದ್ದು, ಇದೀಗ ಮೂರನೇ ಬಾರಿಗೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಕೀಯ ಜೀವನ

ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿಯೇ ಎನ್‌ಎಸ್‌ಯುಐ ಸೇರಿದ್ದ ಪ್ರಿಯಾಂಕ್ ಖರ್ಗೆ, ಬಳಿಕ ರಾಜಕೀಯಕ್ಕೆ ಬಂದರು. ಬಳಿಕ 2007 ರಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ನೇಮಕಗೊಂಡರು. ಪ್ರಸ್ತುತ ಕೆಪಿಸಿಸಿ ಸಾಮಾಜಿಕ ಜಾಲತಾಣ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. 2009 ರ ಕರ್ನಾಟಕ ಅಸೆಂಬ್ಲಿ ಉಪಚುನಾವಣೆಯಲ್ಲಿ ಚಿತ್ತಾಪುರದಿಂದ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯವನ್ನು ಪ್ರವೇಶಿಸಿದರು. ಆದರೆ, ಸ್ಫರ್ಧಿಸಿದ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷದ ವಾಲ್ಮೀಕಿ ನಾಯಕ್ ಅವರ ಎದುರ ಸೋತರು.

ಬಳಿಕ 2013 ರಲ್ಲಿ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರು, ಮತ್ತು 2016 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಐಟಿ ಮತ್ತು ಬಿಟಿ ಹಾಗೂ ಪ್ರವಾಸೋದ್ಯಮ ಸಚಿವರಾದರು. ಈ ಮೂಲಕ 38 ನೇ ವರ್ಷ ವಯಸ್ಸಿನಲ್ಲಿಯೇ ಸಚಿವರಾದರು. 2018 ರಲ್ಲಿ ಮತ್ತೆ ಚಿತ್ತಾಪುರದಿಂದ ಗೆದ್ದರು ಮತ್ತು ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾದರು. ಈ ಮೂಲಕ ಎರಡನೆಯ ಬಾರಿ ಸಚಿವ ಸ್ಥಾನವನ್ನ ಅಲಂಕರಿಸಿದರು. ಇದೀಗ 2023 ರಲ್ಲಿ ಚಿತ್ತಾಪುರ ಕ್ಷೇತ್ರದಿಂದ ಮೂರನೆಯ ಬಾರಿ ಗೆಲುವು ಸಾಧಿಸಿರುವ ಇವರು ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ:Who would be CM? ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿರ್ದಿಷ್ಟವಾಗಿ ಯಾವುದೇ ಸಮುದಾಯದಿಂದ ಕೂಗು ಕೇಳಿ ಬರಲಿಲ್ಲ: ಪ್ರಿಯಾಂಕ್ ಖರ್ಗೆ

ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಜಾರಿಗೆ ತಂದ ಪ್ರಮಖ ಯೋಜನೆಗಳು

ಇನ್ನು 2018 ರಲ್ಲಿ ಕಾಂಗ್ರೆಸ್​ ಜೆಡಿಎಸ್​ ಸಮ್ಮಿಶ್ರ ಸರ್ಕಾರವಾದ ಸಮಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಈ ವೇಳೆ ಐರಾವತ, ಪ್ರಬುದ್ಧ, ಪ್ರಗತಿ, ಸಮೃದ್ದಿ ಹಾಗೂ ಉನ್ನತಿ ಎಂಬ ಹೆಸರಿನ ಮೇಲೆ ವಿವಿಧ ಯೋಜನೆಗಳನ್ನು ಜಾರಿಗೆ ತಂದರು.

ಶೈಕ್ಷಣಿಕ ಸಾಧನೆ

ಇನ್ನು ಇದ್ದ ಕೇಲವೇ ಸಮಯದಲ್ಲಿ ವಾಡಿ ಹಾಗೂ ಚಿತ್ತಾಪುರದಲ್ಲಿ ಎಜುಕೇಷನ್ ಹಬ್ ನಿರ್ಮಾಣ ಮಾಡಿದರು. ಬೆಂಗಳೂರಿನಲ್ಲಿ ಬೆಂಗಳೂರು ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಯೂನಿವರ್ಸಿಟಿ ( ಬಿಎಎಸ್ಇ) ಮಾಡಿ, ಬಿಎಎಸ್​ಇ ನಲ್ಲಿ ಎರಡು ವರ್ಷ ಕೋ‌ ಚೇರ್ಮನ್ ಆಗಿ ಸೇವೆ ಸಲ್ಲಿಸಿದರು. ಅಧಿಕಾರ ಸಿಕ್ಕ ಕೇಲವೇ ಅವಧಿಗಳಲ್ಲಿ ಇಷ್ಟೋಂದು ಮಟ್ಟಿಗೆ ಜನರ ಪರವಾಗಿ ಕೆಲಸ ಮಾಡಿದ ಇವರು ಮತ್ತೊಮ್ಮೆ ಇದೀಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಈ ಸಲದ ಗೆಲುವಿಗೆ ಕಾರಣಗಳು

ಇನ್ನು ಈ ಬಾರಿ ಗೆದ್ದ ಪ್ರಿಯಾಂಕಾ ಖರ್ಗೆ ಅವರ ಗೆಲುವಿನ ಬಗ್ಗೆ ನೋಡುವುದಾದರೆ ‘ಚಿತ್ತಾಪುರ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳಿಗೆ ಜನತೆ‌ ಮನ್ನಣೆ ನೀಡಿದೆ. ಶೈಕ್ಷಣಿಕ ಅಭಿವೃದ್ದಿ, ಮೂಲಭೂತ ಸೌಲಭ್ಯಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು, ಸಂಪರ್ಕ ರಸ್ತೆ‌ ನಿರ್ಮಾಣಕ್ಕೆ ಹಾಗೂ ಕುಡಿಯುವ ನೀರಿಗೆ ಆದ್ಯತೆ, ಆರೋಗ್ಯ ಕ್ಷೇತ್ರದ ಅಮೂಲಾಗ್ರ ಬಲಾವಣೆ ಹಾಗೂ ಮಳೆಯಾಧಾರಿತ ಜಮೀನುಗಳಿಗೆ ನೀರಾವರಿ ಒದಗಿಸಿರುವುದು. ಬಿಜೆಪಿಯ ಘಟಾನುಘಟಿ ‌ನಾಯಕರ ಪ್ರಚಾರದ ನಡುವೆಯೂ ಪ್ರಿಯಾಂಕ್ ಅವರ ಜನಪರ, ಜೀವಪರ ಹಾಗೂ ಜಾತ್ಯಾತೀತ ನಿಲುವುಗಳಿಗೆ ಮತದಾರರು ಜೈ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್