ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸುತ್ತಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿದ್ದಾರೆ. ಇಂದು ಬೆಳಿಗ್ಗೆ ಕನ್ನಡಿಗರು ಬೆಳಗಾವಿಯ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಸ್ಠಾಪನೆ ಮಾಡಿದ ನಂತರ ಕೆಲ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಗಲಾಟೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಆದ್ರೆ ಕೆಲ ಮರಾಠಿ ಪುಂಡರು ಕನ್ನಡಿಗರು ಹಾಗೂ ಕನ್ನಡದ ಧ್ವಜದ ಮೇಲೆ ಚಪ್ಪಲಿ […]

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು
Follow us
Guru
|

Updated on:Aug 28, 2020 | 4:33 PM

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸುತ್ತಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿದ್ದಾರೆ.

ಇಂದು ಬೆಳಿಗ್ಗೆ ಕನ್ನಡಿಗರು ಬೆಳಗಾವಿಯ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಸ್ಠಾಪನೆ ಮಾಡಿದ ನಂತರ ಕೆಲ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಗಲಾಟೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಆದ್ರೆ ಕೆಲ ಮರಾಠಿ ಪುಂಡರು ಕನ್ನಡಿಗರು ಹಾಗೂ ಕನ್ನಡದ ಧ್ವಜದ ಮೇಲೆ ಚಪ್ಪಲಿ ಎಸೆದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು. ಆಗ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಗಲಭೆಕೋರರನ್ನು ಚದುರಿಸಿದ್ದಾರೆ. ಇದಾದ ನಂತರ ರಾಯಣ್ಣ ಮೂರ್ತಿ ಬಳಿ ಮೂರು ಡಿಆರ್ ತುಕಡಿ ಮತ್ತು ಓರ್ವ ಎಸಿಪಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ನಡುವೆ ಪರಿಸ್ಥಿತಿಯನ್ನು ಶಾಂತಗೊಳಿಸಲು ಬೆಳಗಾವಿ ಜಿಲ್ಲಾಧಿಕಾರಿ ಎಂಇಎಸ್‌ ಮತ್ತು ಶಿವಸೇನೆ ಮುಖಂಡರ ಜತೆ ಶಾಂತಿ ಸಭೆ ಮಾಡಿದ್ದಾರೆ. ಆದ್ರೆ ಸಭೆಯಲ್ಲಿ ಮತ್ತೆ ಉದ್ಧಟತನ ತೋರಿರುವ ಶಿವಸೇನೆ ಮತ್ತು ಎಂಇಎಸ್‌ ಪೀರನವಾಡಿಯಲ್ಲಿ ಪ್ರತಿಷ್ಠಾಪಿಸಿರುವ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ.

ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದ ಬಗೆ ಹರಿಯುವವರೆಗೆ ಮೂರ್ತಿಯನ್ನು ಮುಚ್ಚಲು ಪಟ್ಟು ಹಿಡಿದಿದ್ದಾರೆ. ಆದ್ರೆ ಇದಕ್ಕೆ ಡಿಸಿ ಸೊಪ್ಪು ಹಾಕಿಲ್ಲ. ಹೀಗಾಗಿ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಡಿಸಿ ಸಭೆಯಿಂದ ಅರ್ಧದಲ್ಲಿಯೇ ಹೊರ ನಡೆದಿದ್ದಾರೆ.

ಈ ನಡುವೆ ಬೆಳಗಾವಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಪೀರನವಾಡಿಯಲ್ಲಿ ಬಿಗುವಿನ ವಾತಾವರಣವಿದ್ದು, ಯಾವುದೇ ಗಲಭೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡುತ್ತಿದ್ದಾರೆ.

Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್‌ ಪಾಂಡೆ ಬೆಳಗಾವಿಗೆ

Also Read: ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!

Also Read: ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್

Published On - 2:16 pm, Fri, 28 August 20

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ