ಪ್ರೊ.ಹೆಚ್.ಎಸ್.ಶಿವಪ್ರಕಾಶರಿಗೆ ಅಂಬಿಕಾತನಯದತ್ತ ಪ್ರಶಸ್ತಿ
ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ಲೇಖಕ, ಚಿಂತಕ ಪ್ರೊ.ಹೆಚ್.ಎಸ್.ಶಿವಪ್ರಕಾಶ ಭಾಜನರಾಗಿದ್ದಾರೆ.
ಧಾರವಾಡ: ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ಲೇಖಕ, ಚಿಂತಕ ಪ್ರೊ.ಹೆಚ್.ಎಸ್.ಶಿವಪ್ರಕಾಶ ಭಾಜನರಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಅವರು ಪ್ರಶಸ್ತಿಯನ್ನು ಬೇಂದ್ರೆ ಅವರ 125ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರದಾನ ಮಾಡುವುದಾಗಿ ಹೇಳಿದ್ದಾರೆ.
ಒಟ್ಟು ₹1ಲಕ್ಷ ಮೌಲ್ಯದ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಈ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷತೆಯನ್ನು ಡಾ.ಗುರುಪಾದ ಮರೆಗುದ್ದಿ ವಹಿಸಿದ್ದು, ಡಾ.ತಾರಿಣಿ ಶುಭದಾಯಿನಿ ಹಾಗೂ ಪ್ರೊ.ಶಿವಾನಂದ ಕೆಳಗಿನಮನಿ ಸಮಿತಿ ಸದಸ್ಯರಾಗಿದ್ದರು. ಸಮಿತಿ ಆಯ್ಕೆ ಮಾಡಿದ ಮೂರು ಹೆಸರುಗಳ ಟ್ರಸ್ಟ್ ಮಂಡಳಿ ಸಭೆಯಲ್ಲಿ ಪ್ರೊ.ಹೆಚ್.ಎಸ್.ಶಿವಪ್ರಕಾಶ ಅವರ ಹೆಸರು ಅಂತಿಮಗೊಂಡಿದೆ. ಜ.31ರಂದು ಸಾಧನಕೇರಿಯ ಬೇಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಲೋಕಾರ್ಪಣೆ