
ಚಿಕ್ಕಬಳ್ಳಾಪುರ: ದಿನಸಿ ಅಂಗಡಿ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ನಿರಂಜನಮೂರ್ತಿ(50) ಹತ್ಯೆಗೀಡಾದವರು. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿರಂಜನ ಮೂರ್ತಿ, ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.