ಅಧಿಕಾರಿಗಳ ಒತ್ತಡಕ್ಕೆ ಬೇಸತ್ತು PSI ಆತ್ಮಹತ್ಯೆ? ಮಾಜಿ ಪ್ರಧಾನಿ ವಿಷಾದ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆ PSI ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಒತ್ತಡದಿಂದ ಬೇಸತ್ತು PSI ಕಿರಣ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸರಣಿ ಕೊಲೆಗಳು ಹೆಚ್ಚಾಗಿದ್ದರಿಂದ ಹಿರಿಯ ಅಧಿಕಾರಿಗಳಿಂದ PSI ಕಿರಣ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಜೊತೆಗೆ, ಅಧಿಕಾರಿಗಳು ಇಂದು ಚನ್ನರಾಯಪಟ್ಟಣಕ್ಕೆ ಭೇಟಿ ನೀಡಲಿದ್ದರು. ಈ ವೇಳೆ ತಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದ ಕಿರಣ್ ಆತಂಕದಲ್ಲಿದ್ದರು. ಸತತ 2 ದಿನಗಳಿಂದ ನಿರಂತರವಾಗಿ ಕೆಲಸ ಮಾಡಿದ್ದ PSI […]
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆ PSI ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಒತ್ತಡದಿಂದ ಬೇಸತ್ತು PSI ಕಿರಣ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸರಣಿ ಕೊಲೆಗಳು ಹೆಚ್ಚಾಗಿದ್ದರಿಂದ ಹಿರಿಯ ಅಧಿಕಾರಿಗಳಿಂದ PSI ಕಿರಣ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಜೊತೆಗೆ, ಅಧಿಕಾರಿಗಳು ಇಂದು ಚನ್ನರಾಯಪಟ್ಟಣಕ್ಕೆ ಭೇಟಿ ನೀಡಲಿದ್ದರು. ಈ ವೇಳೆ ತಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದ ಕಿರಣ್ ಆತಂಕದಲ್ಲಿದ್ದರು.
ಸತತ 2 ದಿನಗಳಿಂದ ನಿರಂತರವಾಗಿ ಕೆಲಸ ಮಾಡಿದ್ದ PSI ಒಂದು ಕೊಲೆ ಕೇಸ್ ಭೇದಿಸಿ ಮುಗಿಸುವಷ್ಟರಲ್ಲಿ ಮತ್ತೊಂದು ಕೊಲೆ ಎದುರಾಗಿತ್ತು. ಹೀಗಾಗಿ, ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ಅಸಮಾಧಾನ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಅಧಿಕಾರಿಗಳ ವರ್ತನೆಯಿಂದ ಮನನೊಂದು ಕಿರಣ್ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಎಲ್ಲೆಡೆ ವ್ಯಕ್ತವಾಗಿದೆ.
‘ನನ್ನ ತವರಿನಲ್ಲಿ ಇಂಥ ಘಟನೆ ನಡೆದಿದ್ದು ವಿಷಾದನೀಯ’ ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ ಪಿಎಸ್‌ಐಗೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಒತ್ತಡವಿತ್ತು. ಮೇಲಧಿಕಾರಿಗಳ ಒತ್ತಡ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಆಗಬೇಕು ಎಂದು ಹೇಳಿದ್ದಾರೆ. ನನ್ನ ತವರಿನಲ್ಲಿ ಇಂಥ ಘಟನೆ ನಡೆದಿದ್ದು ವಿಷಾದನೀಯ ಎಂದು ಪ್ರತಿಕ್ರಿಯಿಸಿದ್ದಾರೆ.