ಅಧಿಕಾರಿಗಳ ಒತ್ತಡಕ್ಕೆ ಬೇಸತ್ತು PSI ಆತ್ಮಹತ್ಯೆ? ಮಾಜಿ ಪ್ರಧಾನಿ ವಿಷಾದ

| Updated By: ಸಾಧು ಶ್ರೀನಾಥ್​

Updated on: Jul 31, 2020 | 3:00 PM

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆ PSI ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಒತ್ತಡದಿಂದ ಬೇಸತ್ತು PSI ಕಿರಣ್​​ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸರಣಿ ಕೊಲೆಗಳು ಹೆಚ್ಚಾಗಿದ್ದರಿಂದ ಹಿರಿಯ ಅಧಿಕಾರಿಗಳಿಂದ PSI ಕಿರಣ್​ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಜೊತೆಗೆ, ಅಧಿಕಾರಿಗಳು ಇಂದು ಚನ್ನರಾಯಪಟ್ಟಣಕ್ಕೆ ಭೇಟಿ ನೀಡಲಿದ್ದರು. ಈ ವೇಳೆ ತಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದ ಕಿರಣ್ ಆತಂಕದಲ್ಲಿದ್ದರು. ಸತತ 2 ದಿನಗಳಿಂದ ನಿರಂತರವಾಗಿ ಕೆಲಸ ಮಾಡಿದ್ದ PSI […]

ಅಧಿಕಾರಿಗಳ ಒತ್ತಡಕ್ಕೆ ಬೇಸತ್ತು PSI ಆತ್ಮಹತ್ಯೆ? ಮಾಜಿ ಪ್ರಧಾನಿ ವಿಷಾದ
Follow us on

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆ PSI ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಒತ್ತಡದಿಂದ ಬೇಸತ್ತು PSI ಕಿರಣ್​​ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸರಣಿ ಕೊಲೆಗಳು ಹೆಚ್ಚಾಗಿದ್ದರಿಂದ ಹಿರಿಯ ಅಧಿಕಾರಿಗಳಿಂದ PSI ಕಿರಣ್​ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಜೊತೆಗೆ, ಅಧಿಕಾರಿಗಳು ಇಂದು ಚನ್ನರಾಯಪಟ್ಟಣಕ್ಕೆ ಭೇಟಿ ನೀಡಲಿದ್ದರು. ಈ ವೇಳೆ ತಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದ ಕಿರಣ್ ಆತಂಕದಲ್ಲಿದ್ದರು.

ಸತತ 2 ದಿನಗಳಿಂದ ನಿರಂತರವಾಗಿ ಕೆಲಸ ಮಾಡಿದ್ದ PSI ಒಂದು ಕೊಲೆ ಕೇಸ್ ಭೇದಿಸಿ ಮುಗಿಸುವಷ್ಟರಲ್ಲಿ ಮತ್ತೊಂದು ಕೊಲೆ ಎದುರಾಗಿತ್ತು. ಹೀಗಾಗಿ, ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ಅಸಮಾಧಾನ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಅಧಿಕಾರಿಗಳ ವರ್ತನೆಯಿಂದ ಮನನೊಂದು ಕಿರಣ್​ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಎಲ್ಲೆಡೆ ವ್ಯಕ್ತವಾಗಿದೆ.

‘ನನ್ನ ತವರಿನಲ್ಲಿ ಇಂಥ ಘಟನೆ ನಡೆದಿದ್ದು ವಿಷಾದನೀಯ’
ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ ಪಿಎಸ್‌ಐಗೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಒತ್ತಡವಿತ್ತು. ಮೇಲಧಿಕಾರಿಗಳ ಒತ್ತಡ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಆಗಬೇಕು ಎಂದು ಹೇಳಿದ್ದಾರೆ. ನನ್ನ ತವರಿನಲ್ಲಿ ಇಂಥ ಘಟನೆ ನಡೆದಿದ್ದು ವಿಷಾದನೀಯ ಎಂದು ಪ್ರತಿಕ್ರಿಯಿಸಿದ್ದಾರೆ.