
ಚಾಮರಾಜನಗರ: ಜಿಲ್ಲೆಯ ಜಮೀನಿನಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವೊಂದನ್ನು ಉರಗ ತಜ್ಞರು ರಕ್ಷಿಸಿ ಸುರಕ್ಷಿತವಾಗಿ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಧು ಮತ್ತು ಸಂಗಡಿಗರು ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ. ಉರಗ ತಜ್ಞ ಮಧು ಮತ್ತು ಅವರ ಸಂಗಡಿಗರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.