ಕ್ವಾರಂಟೈನ್ ಉಲ್ಲಂಘಿಸಿ ಓಡಾಡುತ್ತಿದ್ದವರಿಗೆ ಬುದ್ಧಿ ಹೇಳಿದ ಯೋಧನ ಕುಟುಂಬಸ್ಥರ ಮೇಲೆ ಹಲ್ಲೆ!

ಬಾಗಲಕೋಟೆ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಗ್ರಾಮದಲ್ಲಿ ಓಡಾಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬುದ್ಧಿ ಹೇಳಿದ ಯೋಧನ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಅಮೀನಗಡ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿಯಿಂದ ಗ್ರಾಮಕ್ಕೆ ವಾಪಸಾಗಿದ್ದ ಹಿನ್ನೆಲೆಯಲ್ಲಿ ಹನಮಂತ, ಲಿಂಬಣ್ಣ, ಅಶೋಕ, ಮೇಘರಾಜ, ರುಕ್ಮವ್ವ, ಸಕರವ್ವ ಎಂಬುವವರು ಹೋಂ ಕ್ವಾರಂಟೈನ್​ನಲ್ಲಿ ಇರಬೇಕಿತ್ತು. ಆದರೆ ಇವರು ಆದೇಶ ಉಲ್ಲಂಘಿಸಿ ಮನೆಯಿಂದ ಆಚೆ ಓಡಾಡುತ್ತಿದ್ದರು. ಹೀಗಾಗಿ ಹೊರಗಡೆ ತಿರುಗಾಡದಂತೆ ಬುದ್ಧಿ ಹೇಳಿದ್ದಕ್ಕೆ ಯೋಧನ ತಂದೆ, ತಾಯಿ, ಅಜ್ಜಿಯ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಾರೆ. […]

ಕ್ವಾರಂಟೈನ್ ಉಲ್ಲಂಘಿಸಿ ಓಡಾಡುತ್ತಿದ್ದವರಿಗೆ ಬುದ್ಧಿ ಹೇಳಿದ ಯೋಧನ ಕುಟುಂಬಸ್ಥರ ಮೇಲೆ ಹಲ್ಲೆ!
ಸಾಧು ಶ್ರೀನಾಥ್​

Updated on: Apr 19, 2020 | 9:13 AM

ಬಾಗಲಕೋಟೆ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಗ್ರಾಮದಲ್ಲಿ ಓಡಾಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬುದ್ಧಿ ಹೇಳಿದ ಯೋಧನ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಅಮೀನಗಡ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿಯಿಂದ ಗ್ರಾಮಕ್ಕೆ ವಾಪಸಾಗಿದ್ದ ಹಿನ್ನೆಲೆಯಲ್ಲಿ ಹನಮಂತ, ಲಿಂಬಣ್ಣ, ಅಶೋಕ, ಮೇಘರಾಜ, ರುಕ್ಮವ್ವ, ಸಕರವ್ವ ಎಂಬುವವರು ಹೋಂ ಕ್ವಾರಂಟೈನ್​ನಲ್ಲಿ ಇರಬೇಕಿತ್ತು. ಆದರೆ ಇವರು ಆದೇಶ ಉಲ್ಲಂಘಿಸಿ ಮನೆಯಿಂದ ಆಚೆ ಓಡಾಡುತ್ತಿದ್ದರು. ಹೀಗಾಗಿ ಹೊರಗಡೆ ತಿರುಗಾಡದಂತೆ ಬುದ್ಧಿ ಹೇಳಿದ್ದಕ್ಕೆ ಯೋಧನ ತಂದೆ, ತಾಯಿ, ಅಜ್ಜಿಯ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ ಇವರ ನೋವಿಗೆ ಪೊಲೀಸರು ಸ್ಪಂದಿಸ್ತಿಲ್ಲವೆಂದು ಯೋಧನ ಕುಟುಂಬದ ಅಳಲನ್ನು ತೋಡಿಕೊಂಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us