AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಅಖಂಡ ಶ್ರೀನಿವಾಸಮೂರ್ತಿಯನ್ನ ಮುಗಿಸಲು ಬಂದಂತಿದೆ: ಸಚಿವ ಅಶೋಕ್

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಹಿಂಸಾಚಾರದಲ್ಲಿ ಗಲಭೆಕೋರರು ಶಾಸಕ ಅಖಂಡ ಶ್ರೀನಿವಾಸಮೂರ್ತಿಯನ್ನ ಮುಗಿಸಲು ಬಂದಂತಿದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R​ ಅಶೋಕ್​ ಹೇಳಿದ್ದಾರೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೌಮ್ಯ ಸ್ವಭಾವದವರು. ನಿನ್ನೆ ಘಟನೆಯಿಂದ ಅವರ ಅಣ್ಣ-ತಮ್ಮಂದಿರು ಬೀದಿಪಾಲಾಗಿದ್ದಾರೆ. ಕಿಡಿಗೇಡಿಗಳು ಅವರ ಮನೆಗಳಲ್ಲೂ ಲೂಟಿ ಮಾಡಿದ್ದಾರೆ. ಜೊತೆಗೆ, ಮನೆಗಳಲ್ಲಿ ಇದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಶೋಕ್​ ಹೇಳಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿಯನ್ನ ಗಲಭೆಕೋರರು ಮುಗಿಸಲು ಬಂದಂತಿದೆ. ಈಗಾಗಲೇ 100ಕ್ಕೂ ಹೆಚ್ಚು […]

ಶಾಸಕ ಅಖಂಡ ಶ್ರೀನಿವಾಸಮೂರ್ತಿಯನ್ನ ಮುಗಿಸಲು ಬಂದಂತಿದೆ: ಸಚಿವ ಅಶೋಕ್
KUSHAL V
|

Updated on:Aug 12, 2020 | 4:03 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಹಿಂಸಾಚಾರದಲ್ಲಿ ಗಲಭೆಕೋರರು ಶಾಸಕ ಅಖಂಡ ಶ್ರೀನಿವಾಸಮೂರ್ತಿಯನ್ನ ಮುಗಿಸಲು ಬಂದಂತಿದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R​ ಅಶೋಕ್​ ಹೇಳಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೌಮ್ಯ ಸ್ವಭಾವದವರು. ನಿನ್ನೆ ಘಟನೆಯಿಂದ ಅವರ ಅಣ್ಣ-ತಮ್ಮಂದಿರು ಬೀದಿಪಾಲಾಗಿದ್ದಾರೆ. ಕಿಡಿಗೇಡಿಗಳು ಅವರ ಮನೆಗಳಲ್ಲೂ ಲೂಟಿ ಮಾಡಿದ್ದಾರೆ. ಜೊತೆಗೆ, ಮನೆಗಳಲ್ಲಿ ಇದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಶೋಕ್​ ಹೇಳಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿಯನ್ನ ಗಲಭೆಕೋರರು ಮುಗಿಸಲು ಬಂದಂತಿದೆ. ಈಗಾಗಲೇ 100ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಕೇರಳ ಸೇರಿದಂತೆ ಹೊರಗಿನಿಂದ ಬಂದವರು ಇದ್ದಾರೆ. ನಗರವನ್ನ ತಲ್ಲಣಗೊಳಿಸಬೇಕೆಂದು ಇಂಥ ಕೃತ್ಯಕ್ಕೆ ಕುಮ್ಮಕ್ಕು ನೀಡಲಾಗಿದೆ. ಆದರೆ, ಇಂಥ ಕೃತ್ಯ ಎಸಗುವ ಯಾರನ್ನೂ ಸರ್ಕಾರ ಸುಮ್ಮನೆ ಬಿಡಲ್ಲ. ಪೊಲೀಸರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಾಜಿನಗರದಲ್ಲಿ ಕೃತ್ಯಕ್ಕೆ ಹುನ್ನಾರ ನಡೆಸಲಾಗಿದೆ. ಆದರೆ, ಎಲ್ಲದಕ್ಕೂ ಪೊಲೀಸರು ಕಡಿವಾಣ ಹಾಕಿದ್ದಾರೆ. ಕಿಡಿಗೇಡಿಗಳನ್ನ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲು ಸಿಎಂ ಸೂಚಿಸಿದ್ದಾರೆ ಎಂದು ಅಶೋಕ್​ ಸ್ಪಷ್ಟಪಡಿಸಿದರು.

ಈ ಘಟನೆ ಹಿಂದೆ ಇರುವ ಯಾರನ್ನೂ ಬಿಡಬಾರದು. ಶಾಸಕರು ಮತ್ತು ಅವರ ಕುಟುಂಬವನ್ನು ಟಾರ್ಗೆಟ್​ ಮಾಡಲಾಗಿದೆ. ಬೆಂಗಳೂರಿಗರನ್ನ ಬೆದರಿಸಬೇಕೆಂದು ಇಂಥ ಕೃತ್ಯಕ್ಕೆ ಕೈಹಾಕಲಾಗಿದೆ. ಸಿಎಂ ಭೇಟಿ ಬಳಿಕ ಮುಂದಿನ ತನಿಖೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಜೊತೆಗೆ ಶಾಸಕರಿಗೆ, ಎಲ್ಲ ರೀತಿಯ ರಕ್ಷಣೆ ನೀಡುವುದಾಗಿ ಸರ್ಕಾರದಿಂದ ಭರವಸೆ ಕೊಟ್ಟಿದ್ದೇವೆ ಎಂದು ಹೇಳಿದರು.

‘ಕಿಡಿಗೇಡಿಗಳನ್ನ ಬಂಧಿಸಿ ಜೈಲಿಗೆ ಕಳಿಸೋವರೆಗೂ ಬಿಡಲ್ಲ’ ಕಿಡಿಗೇಡಿಗಳನ್ನ ಬಂಧಿಸಿ ಜೈಲಿಗೆ ಕಳಿಸೋವರೆಗೂ ಬಿಡಲ್ಲ. ಇಂಥ ಕೃತ್ಯ ಮಾಡುವುದು ನಕ್ಸಲರು ಮಾತ್ರ. ಈ ರೀತಿ ಮಾಡಿದ್ದಾರೆ ಅಂದರೆ ಯಾವ ಮಟ್ಟಕ್ಕೆ ಬಂದಿದ್ದಾರೆ ಎಂದು ತಿಳಿಯುತ್ತದೆ. ಸದ್ಯ ಎಲ್ಲ ಪ್ರದೇಶಗಳು ಸಂಪೂರ್ಣ ನಿಯಂತ್ರಣದಲ್ಲಿದೆ. ಡಿಸಿಪಿಯನ್ನು ಕೂಡಿ ಹಾಕ್ತಾರೆಂದರೆ ಅವರು ದೇಶದ್ರೋಹಿಗಳು . ದೇಶದ್ರೋಹಿಗಳಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ ಎಂದೂ ಅವರು ಹೇಳಿದರು.

ಇದನ್ನೂ ಓದಿ: ಸಮುದಾಯದ ವಿರುದ್ಧ ಅವಹೇಳನಾಕಾರಿ ಪೋಸ್ಟ್: ಪುಲಿಕೇಶಿ ನಗರ MLA ಮನೆ, DJ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಪೊಲೀಸ್‌ ಫೈರಿಂಗ್‌ಗೆ 2 ಬಲಿ

https://www.facebook.com/Tv9Kannada/posts/1413609288841297

Published On - 3:55 pm, Wed, 12 August 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!