ಒಂದೇ ಸಭೆಯಲ್ಲಿ ಭಾಗಿಯಾದ ಇಬ್ಬರು ಶಾಸಕರಿಗೆ ಎದುರಾಯ್ತು ಕೊರೊನಾ ಕಂಟಕ

ಕೊಪ್ಪಳ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಇಂದು ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಜುಲೈ 16 ರಂದು ನಡೆದಿದ್ದ ಕೊವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಭಾಗಿಯಾಗಿದ್ದರು.  ಶಾಸಕ ಹಿಟ್ನಾಳ್ ಪಕ್ಕದಲ್ಲೇ ಕುಳಿತ್ತಿದ್ದ ಶಾಸಕ ಪರಣ್ಣ ಮುನವಳ್ಳಿಗೆ ಇಂದು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇದೀಗ ಹಿಟ್ನಾಳ್​ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಜೊತೆಗೆ ತಮ್ಮ ಸಂಪರ್ಕದಲ್ಲಿದವರಿಗೂ ಎಚ್ಚರಿಕೆ […]

ಒಂದೇ ಸಭೆಯಲ್ಲಿ ಭಾಗಿಯಾದ ಇಬ್ಬರು ಶಾಸಕರಿಗೆ ಎದುರಾಯ್ತು ಕೊರೊನಾ ಕಂಟಕ

Updated on: Jul 19, 2020 | 7:34 PM

ಕೊಪ್ಪಳ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಇಂದು ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ.

ಜುಲೈ 16 ರಂದು ನಡೆದಿದ್ದ ಕೊವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಭಾಗಿಯಾಗಿದ್ದರು.  ಶಾಸಕ ಹಿಟ್ನಾಳ್ ಪಕ್ಕದಲ್ಲೇ ಕುಳಿತ್ತಿದ್ದ ಶಾಸಕ ಪರಣ್ಣ ಮುನವಳ್ಳಿಗೆ ಇಂದು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇದೀಗ ಹಿಟ್ನಾಳ್​ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಜೊತೆಗೆ ತಮ್ಮ ಸಂಪರ್ಕದಲ್ಲಿದವರಿಗೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.