
ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟಕ್ಕೆ ಪೊಲೀಸ್ ಇಲಾಖೆ ಅಕ್ಷರಶಃ ನಲುಗಿ ಹೋಗಿದೆ. ಸಿಬ್ಬಂದಿಗೆ ಸೋಂಕು ತಗಲುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ.
ಇದೀಗ, ಹೋಮ್ ಕ್ವಾರಂಟೈನ್ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯನ್ನ ಸೀಲ್ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದ್ದು ಇಡೀ ಠಾಣೆಗೆ ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪಡನೆ ಮಾಡಿದರು.
Published On - 10:57 am, Wed, 1 July 20