ರಾಜ್ಯಸಭಾ ಚುನಾವಣೆ 2020: ಜೆಡಿಎಸ್​​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದೇವೇಗೌಡ

ಬೆಂಗಳೂರು: ಜೂನ್ 19ರಂದು ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಹೆಚ್​.ಡಿ.ಕುಮಾರಸ್ವಾಮಿ, ಹೆಚ್​.ಡಿ.ರೇವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕಳೆದ ಲೋಕಸಭೆ ಚುನಾವಣೆಗೂ ಮುನ್ನವೇ ಬಹಿರಂಗವಾಗಿ ಹೇಳಿದ್ದೆ. ಆದ್ರೆ ಕಳೆದ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ ಸೋತೆ. ನಂತರ ಮನಸ್ಸು ಗಟ್ಟಿ ಮಾಡಿಕೊಂಡು ಮತ್ತೆ ಚುನಾವಣೆ ಸ್ಪರ್ಧೆ ಮಾಡೋದು ಬೇಡ ಎಂದು ತೀರ್ಮಾನ ಮಾಡಿದ್ದೆ. ಪಕ್ಷದ ಕೆಲಸ ಮಾಡಿಕೊಂಡು ಹೋಗಲು ನಿರ್ಧಾರ […]

ರಾಜ್ಯಸಭಾ ಚುನಾವಣೆ 2020: ಜೆಡಿಎಸ್​​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದೇವೇಗೌಡ
Edited By:

Updated on: Jun 09, 2020 | 1:51 PM

ಬೆಂಗಳೂರು: ಜೂನ್ 19ರಂದು ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಹೆಚ್​.ಡಿ.ಕುಮಾರಸ್ವಾಮಿ, ಹೆಚ್​.ಡಿ.ರೇವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕಳೆದ ಲೋಕಸಭೆ ಚುನಾವಣೆಗೂ ಮುನ್ನವೇ ಬಹಿರಂಗವಾಗಿ ಹೇಳಿದ್ದೆ. ಆದ್ರೆ ಕಳೆದ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ ಸೋತೆ. ನಂತರ ಮನಸ್ಸು ಗಟ್ಟಿ ಮಾಡಿಕೊಂಡು ಮತ್ತೆ ಚುನಾವಣೆ ಸ್ಪರ್ಧೆ ಮಾಡೋದು ಬೇಡ ಎಂದು ತೀರ್ಮಾನ ಮಾಡಿದ್ದೆ. ಪಕ್ಷದ ಕೆಲಸ ಮಾಡಿಕೊಂಡು ಹೋಗಲು ನಿರ್ಧಾರ ಮಾಡಿದ್ದೆ. ಆದ್ರೆ ನಮ್ಮ ಶಾಸಕರು ಮತ್ತೆ ನನ್ನನ್ನು ರಾಜ್ಯಸಭೆಗೆ ಹೋಗಬೇಕು ಅಂತ ಒತ್ತಾಯ ಮಾಡಿದ್ರು. ಹೀಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೆಚ್​.ಡಿ.ದೇವೇಗೌಡ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿ, ರೇವಣ್ಣ ಒತ್ತಾಯ ಇಲ್ಲ:
ಇದರಲ್ಲಿ ಕುಮಾರಸ್ವಾಮಿ, ರೇವಣ್ಣ ಒತ್ತಾಯ ಇರಲಿಲ್ಲ. ಕಾಂಗ್ರೆಸ್ ಸಹ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾತ್ರವೇ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ರು. ಸೋನಿಯಾಗಾಂಧಿ ಸಹ ನಂತರ ನನ್ನ ಜತೆ ಮಾತನಾಡಿದ್ದಾರೆ. ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಸಾಕಷ್ಟು ಸೋಲು ಸಹ ಕಂಡಿದ್ದೇನೆ. ಪ್ರತಿ 10 ವರ್ಷಕ್ಕೊಮ್ಮೆ ಸೋತಿದ್ದೇನೆ. ಇದಕ್ಕೆಲ್ಲ ಯೋಚನೆ ಮಾಡಿದವನಲ್ಲ ಎಂದರು.

Published On - 1:41 pm, Tue, 9 June 20