ವಿವೇಕಾನಂದರ ಜನ್ಮ ದಿನವಾದ ಇಂದೇ ಇಹಲೋಕ ತ್ಯಜಿಸಿದ ಸ್ವಾಮಿ ಹರ್ಷಾನಂದ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 12, 2021 | 6:33 PM

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮಧ್ಯಾಹ್ನ 1.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ವಿವೇಕಾನಂದರ ಜನ್ಮ ದಿನವಾದ ಇಂದೇ ಇಹಲೋಕ ತ್ಯಜಿಸಿದ ಸ್ವಾಮಿ ಹರ್ಷಾನಂದ
ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ
Follow us on

ಬೆಂಗಳೂರು: ನಗರದ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ(91) ಅವರು ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮಧ್ಯಾಹ್ನ 1.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ಸ್ವಾಮಿ ವಿವೇಕಾನಂದರ ಅಪ್ಪಟ ಅನುಯಾಯಿಯಾಗಿದ್ದ ಸ್ವಾಮಿ ಹರ್ಷಾನಂದ ಅವರು ವಿವೇಕಾನಂದರ ಜನ್ಮದಿನವಾದ ಇಂದೇ ಇಹಲೋಕ ತ್ಯಜಿಸಿದ್ದಾರೆ. ಹಿಂದೂ ಧರ್ಮದ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿದ್ದರು. encyclopedia of hinduism ಎಂಬ ಮಹತ್ತರ ಕೃತಿಯನ್ನು ರಚಿಸಿದ್ದರು. ಎಲ್ಲಾ ವಯೋಮಾನದವರೊಂದಿಗೆ ಆಪ್ತ ಒಡನಾಟ ಇರಿಸಿಕೊಂಡಿದ್ದರು.

ಹರ್ಷಾನಂದರ ನಿಧನಕ್ಕೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಅಂತಿಮ ದರ್ಶನ
ಇಂದು ಸಂಜೆ 5 ರಿಂದ 8, ನಾಳೆ ಬೆಳಿಗ್ಗೆ 6ರಿಂದ 12ರ ವರೆಗೆ ಶ್ರೀ ರಾಮಕೃಷ್ಣ ವಿದ್ಯಾರ್ಥ ಮಂದಿರದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ರಾಮಕೃಷ್ಣಾಶ್ರಮದ ಮೂಲಗಳು ತಿಳಿಸಿವೆ.

ನಿತ್ಯ ಬಳಸುವ ಪದಗಳಿಗೆ ಭಾವ-ಜೀವ ತುಂಬಿದ್ದ ಅಪರೂಪದ ಅಧ್ಯಾತ್ಮ ಸಾಧಕ ಸ್ವಾಮಿ ಹರ್ಷಾನಂದ ಮಹಾರಾಜ್

ಸ್ವಾಮಿ ಹರ್ಷಾನಂದರ ಸ್ಮರಣೆ | ವನಸುಮದೊಳೆನ್ನ ಜೀವನವು ವಿಕಸಿಸುವಂತೆ ಎಂಬಂತಿದ್ದರು ಗುರುಗಳು

ಸ್ವಾಮಿ ಹರ್ಷಾನಂದರ ನೆನಪು | ಸದಾ ಪ್ರೋತ್ಸಾಹ, ಸ್ಫೂರ್ತಿ ನೀಡುತ್ತಿದ್ದ ಹಿರಿಯ ಸೋದರ

Published On - 3:37 pm, Tue, 12 January 21