ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದಾರೆ.

ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ
Follow us
Skanda
|

Updated on: Apr 05, 2021 | 12:38 PM

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣದಲ್ಲಿ ಎಸ್​ಐಟಿ ತನಿಖೆ ಎದುರು ನೋಡುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಲಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದು, ಮಾಜಿ ಸಚಿವರ ಕಾರು ಚಾಲಕ ಹಾಗೂ ಅಡುಗೆ ಭಟ್ಟ ಇಬ್ಬರಿಗೂ ಕೊರೊನಾ ಪಾಸಿಟಿವ್​ ಬಂದಿದೆ ಎಂದು ತಿಳಿಸಿದ್ದಾರೆ.

ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ ಇದೀಗ ರಮೇಶ್​ ಜಾರಕಿಹೊಳಿ ಕಾರು ಚಾಲಕ ಹಾಗೂ ಅಡುಗೆ ಭಟ್ಟನಿಗೂ ಕೊರೊನಾ ಬಂದಿದ್ದು, ಅವರ ಆಪ್ತ ವರ್ಗದಲ್ಲಿದ್ದವರೆಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗಬೇಕಾಗಬಹುದಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಸದ್ಯ ಕೊರೊನಾ ಪಾಸಿಟಿವ್​ ಬಂದಿರುವುದರಿಂದಾಗಿ ರಮೇಶ್​ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಗೈರಾಗಲಿದ್ದಾರೆ. ಇನ್ನೊಂದೆಡೆ ರಮೇಶ್​ ಜಾರಕಿಹೊಳಿಯವರ ನಿವಾಸದಿಂದ ಕೂಗಳತೆ ದೂರದಲ್ಲಿರುವ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯರು ರಮೇಶ್​ ಜಾರಕಿಹೊಳಿಗೆ ಇನ್ನೂ ಐದರಿಂದ ಹತ್ತು ದಿನಗಳ ಕಾಲ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲು ಯೋಚಿಸಿದ್ದಾರೆ. ಆದ ಕಾರಣ ಹತ್ತು ಹದಿನೈದು ದಿನಗಳವರೆಗೆ ರಮೇಶ್​ ಜಾರಕಿಹೊಳಿ ಬೆಂಗಳೂರಿನ ಕಡೆ ತಲೆ ಹಾಕುವ ಸಂಭವ ಕಡಿಮೆ ಇದ್ದು, ಎಸ್​ಐಟಿ ತನಿಖೆಯಿಂದಲೂ ತಾತ್ಕಾಲಿಕ ವಿನಾಯಿತಿ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಕೆಲ ಹೊತ್ತಿನ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿದ ಬಗ್ಗೆ ವಿವರಣೆ ನೀಡಿದ್ದ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರು ರಮೇಶ್ ಜಾರಕಿಹೊಳಿಗೆ ನಿನ್ನೆ ರಾತ್ರಿ ಉಸಿರಾಟ ತೊಂದರೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಗರ್, ಬಿಪಿಯಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊವಿಡ್ ನಿಯಮದಂತೆ ಇನ್ನೂ 5 ದಿನ ಆಸ್ಪತ್ರೆಯಲ್ಲಿರಬೇಕು ಎಂದು ತಿಳಿಸಿದ್ದಾರೆ. ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ರಮೇಶ್​ ಜಾರಕಿಹೊಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಹಿಂದಿನಿಂದಲೂ ಗೋಕಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದರು. ಸದ್ಯ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ, ಬೆಂಗಳೂರಿಗೆ ಹೋಗಿ ಬಂದಿದ್ದ ಕಾರಣ ಅವರಿಗೆ ರ‍್ಯಾಪಿಡ್ ಟೆಸ್ಟ್​ ಮಾಡಲಾಗಿದ್ದು, ಪಾಸಿಟಿವ್ ಕಾಣಿಸಿಕೊಂಡಿದೆ. ತಜ್ಞ ವೈದ್ಯರ ನಿಗಾದಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ 

Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ