ಈಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು!

|

Updated on: Mar 08, 2021 | 5:04 PM

ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮೂಲಕ‌ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಯಾರೋ ಹೋರಾಟಗಾರರು ಡೀಲ್ ಮಾಡಿಕೊಂಡಿದ್ದಾರೆ ಎಂಬ ತಪ್ಪು ಸಂದೇಶ ಬೇಡ. ಕುಮಾರಸ್ವಾಮಿಯವರ ವಿಚಾರಣೆ ನಡೆಸಿ ಸತ್ಯವನ್ನ ಜನರ ಮುಂದಿಡಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ

ಈಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು!
ಎಚ್​.ಡಿ.ಕುಮಾರಸ್ವಾಮಿ
Follow us on

ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು ಕೇಂದ್ರ ವಿಭಾಗದ ಡಿಸಿಪಿಗೆ ಸಿ.ಎಂ. ಶಿವಕುಮಾರ್ ನಾಯ್ಕ್ ಎಂಬುವವರು ದೂರು ದಾಖಲಿಸಿದ್ದಾರೆ. ಶಿವಕುಮಾರ್ ನಾಯ್ಕ್ ಅವರು ವಂದೇ ಮಾತರಂ ಸಮಾಜ ಸೇವಾ ಸಂಘಟನೆಯ ರಾಜ್ಯಾಧ್ಯಕ್ಷ.

ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮೂಲಕ‌ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಯಾರೋ ಹೋರಾಟಗಾರರು ಡೀಲ್ ಮಾಡಿಕೊಂಡಿದ್ದಾರೆ ಎಂಬ ತಪ್ಪು ಸಂದೇಶ ಬೇಡ. ಕುಮಾರಸ್ವಾಮಿಯವರ ವಿಚಾರಣೆ ನಡೆಸಿ ಸತ್ಯವನ್ನ ಜನರ ಮುಂದಿಡಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.