ಬಿಡುಗಡೆಗೆ ರೆಡಿಯಾಗಿದೆ ‘ರವಿಕೆ ಪ್ರಸಂಗ’
Sandalwood news: ರವಿಕೆಯನ್ನೇ ಪ್ರಧಾನವಾಗಿಟ್ಟುಕೊಂಡು ಹೆಣೆದಿರುವ ಕತೆಯುಳ್ಳ ಸಿನಿಮಾ ‘ರವಿಕೆ ಪ್ರಸಂಗ’ ಬಿಡುಗಡೆಗೆ ರೆಡಿಯಾಗಿದೆ. ಇದು ಕೌಟುಂಬಿಕ ಹಾಸ್ಯಪ್ರಧಾನ ಸಿನಿಮಾ ಎಂದಿದೆ ಚಿತ್ರತಂಡ.
ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾಗಿರುವ ಸಂತೋಷ್ ಕೊಡೆಂಕೇರಿ ನಿರ್ದೇಶನದ ‘ರವಿಕೆ ಪ್ರಸಂಗ’ (Ravike Prasanga) ಸಿನಿಮಾಕ್ಕೆ ಯುಎ ಪ್ರಮಾಣ ಪತ್ರ ನೀಡಿದ್ದು ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ‘ರವಿಕೆ ಪ್ರಸಂಗ’ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಇತ್ತೀಚೆಗೆ ತೆರೆ ಕಾಣುತ್ತಿರುವ ಭಿನ್ನ ಕತೆಯುಳ್ಳ ಸಿನಿಮಾಗಳ ಸಾಲಿಗೆ ಇದೂ ಸಹ ಸೇರಿಕೆಯಾಗಲಿದೆ ಎಂಬುದು ಚಿತ್ರತಂಡದ ನಂಬಿಕೆ.
‘ರವಿಕೆ ಪ್ರಸಂಗ’ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಸಖತ್ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕತೆಯೊಂದನ್ನು ಹಾಸ್ಯಭರಿತವಾಗಿ ಹೇಳುವ ಪ್ರಯತ್ನ ಚಿತ್ರತಂಡದ್ದು, ಸಿನಿಮಾದಲ್ಲಿ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಮಾಡಿದ್ದಾರಂತೆ.
‘ದೃಷ್ಟಿ ಮೀಡಿಯಾ’ ಪ್ರೊಡಕ್ಷನ್‌ನಡಿ ಚಿತ್ರ ನಿರ್ಮಾಣವಾಗಿದೆ. ಸಿನಿಮಾದ ‘ರವಿಕೆ’ ಹಾಡನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ‘ಮನಸಲಿ ಜೋರು ಕಲರವ’ ಎಂಬ ಮತ್ತೊಂದು ಹಾಡನ್ನು ಮಾನಸ ಹೊಳ್ಳ ಮತ್ತು ‘ಹಸಿಮನಸಲಿ’ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ. ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ ಹಾಡುಗಳಿಗೆ ಸಖತ್ ಡ್ಯಾನ್ಸ್ ಮಾಡಿದ್ದಾರಂತೆ. ಅವರ ಅಭಿನಯದ ಬಗ್ಗೆಯೂ ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:Sudeep on Darshan: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್
‘ರವಿಕೆ ಪ್ರಸಂಗ’ ಸಿನಿಮಾವನ್ನು ಮಾರ್ಷ್ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ಕರ್ನಾಟಕದ ಹಲೆವೆಡೆ ಬಿಡುಗಡೆ ಮಾಡಲಿದೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗಲಿದೆ ಎಂದಿದೆ ಚಿತ್ರತಂಡ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದ್ದು. ಪ್ರತಿಯೊಬ್ಬ ಮಹಿಳೆಯರ ಜೀವನದಲ್ಲಿ ನಡೆಯುವಂತಹ ಕತೆಯನ್ನು ಈ ಸಿನಿಮಾ ಹೊಂದಿರುವುದಾಗಿ ನಿರ್ದೇಶಕರು ಹೇಳಿದ್ದಾರೆ. ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ.
ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಇರಲೇಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ ‘ರವಿಕೆ ಪ್ರಸಂಗ’. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಬಹಳ ಕುತೂಹಲವಿದೆ. ಫೆಬ್ರವರಿ 16 ರಂದು ರವಿಕೆಪ್ರಸಂಗ ರಾಜ್ಯಾದ್ಯಂತ ತೆರೆಕಾಣಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ