ಬೆಂಗಳೂರು: ಮಾಸ್ಕ್ ಧರಿಸದವರಿಗೆ 1,000 ರೂಪಾಯಿ ದಂಡ ವಿಧಿಸಿದ ಹಿನ್ನೆಲೆಯಲ್ಲಿ BBMP ಮಾರ್ಷಲ್‌ಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿರುವ ಘಟನೆ T.ದಾಸರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
ರಾಜ್ಯ ಸರ್ಕಾರವೇ ನಮಗೆ ಉಚಿತವಾಗಿ ಮಾಸ್ಕ್ ನೀಡಲಿ. ಮಾಸ್ಕ್ ಕೊಟ್ಟು ಆನಂತರ ಕಡ್ಡಾಯ ಮಾಡಲಿ ಎಂದು ಜನ ಕಿಡಿಕಾರಿದ್ದಾರೆ. ಕೇವಲ ದಂಡ ವಸೂಲಿಮಾಡಿದರೆ ಏನು ಪ್ರಯೋಜನವಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.