ಗೂಡ್ಸ್ ವಾಹನದಡಿ ಸಿಲುಕಿ ನಿವೃತ್ತ ಶಿಕ್ಷಕ ಸಾವು.. ಭೀಕರ ಅಪಘಾತ CCTVಯಲ್ಲಿ ಸೆರೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ BH ರಸ್ತೆಯಲ್ಲಿ ಘಟನೆ ಬುಧವಾರ ಸಂಜೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ನಿವೃತ್ತ ಶಿಕ್ಷಕ ನಾಗರಾಜ್ ತೆರಳುತ್ತಿದ್ದ ವೇಳೆ ಆಯತಪ್ಪಿ ಮತ್ತೊಂದು ಗೂಡ್ಸ್ ವಾಹನದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ನಾಗರಾಜ್ ಗೌರಿಬಿದನೂರು ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ಲೈವ್ ವೀಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ BH ರಸ್ತೆಯಲ್ಲಿ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ದ್ವಿಚಕ್ರ ವಾಹನದಲ್ಲಿ ನಿವೃತ್ತ ಶಿಕ್ಷಕ ನಾಗರಾಜ್ ತೆರಳುತ್ತಿದ್ದ ವೇಳೆ ಆಯತಪ್ಪಿ ಮತ್ತೊಂದು ಗೂಡ್ಸ್ ವಾಹನದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ನಾಗರಾಜ್ ಗೌರಿಬಿದನೂರು ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ಲೈವ್ ವೀಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.