AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ: ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ ಪೈಪೋಟಿ

ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ: ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ ಪೈಪೋಟಿ
ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ
ಪೃಥ್ವಿಶಂಕರ
|

Updated on:Mar 05, 2021 | 8:30 AM

Share

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್​ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ.

ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಒಂದು ಬಾರಿ ಬೆಳಗಾವಿ ಉಸ್ತುವಾರಿ ಅವಕಾಶ ನಮಗೂ ಕೊಡಿ ಅಂತಾ ಶಶಿಕಲಾ ಜೊಲ್ಲೆ ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ. ಹೀಗಾಗಿ ಸಿಎಂಗೆ ಬೆಳಗಾವಿ ಉಸ್ತುವಾರಿ ಹಂಚಿಕೆ ವಿಚಾರ ಮತ್ತೆ ತಲೆನೋವಾಗಿ ಪರಿಣಮಿಸಿದೆ.

ಜಗದೀಶ್ ಶೆಟ್ಟರ್‌ಗೆ ಉಸ್ತುವಾರಿ ನೀಡಲು ಚಿಂತನೆ.. ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರು ಯಡಿಯೂರಪ್ಪ ಮೇಲೆ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸರ್ಕಾರ ರಚನೆಯಾದ ಸಂದರ್ಭದಲ್ಲಿ ನೀಡಿದಂತೆ ಹೊರಗಿನ ಜಿಲ್ಲೆಯವರಿಗೆ ಉಸ್ತುವಾರಿ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ‌ಗೂ ಮುನ್ನ ಜಗದೀಶ್ ಶೆಟ್ಟರ್‌ಗೆ ಸಿಎಂ ಉಸ್ತುವಾರಿ ನೀಡಿದ್ದರು. ಇದೀಗ ಮತ್ತೆ ಜಗದೀಶ್ ಶೆಟ್ಟರ್‌ಗೆ ಉಸ್ತುವಾರಿ ನೀಡಲು ಚಿಂತನೆ ನಡೆಸಲಾಗಿದೆ.

ಇದಕ್ಕೆ ಬೆಳಗಾವಿ ಜಿಲ್ಲೆಯ ನಾಯಕರು ವಿರೋಧಿಸಿದ್ರೇ ಉಮೇಶ್ ಕತ್ತಿಗೆ ಉಸ್ತುವಾರಿ ನೀಡಲು ಪ್ಲ್ಯಾನ್‌ ಮಾಡಲಾಗಿದೆ. ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿರುವ ಹಿನ್ನೆಲೆಯಿಂದಾಗಿ ಬೆಳಗಾವಿ ಉಸ್ತುವಾರಿಯನ್ನ ಕತ್ತಿಗೆ ನೀಡಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: 61 ಲಕ್ಷ ರೂಪಾಯಿ ಬೆಲೆಬಾಳುವ ಬೆಳಗಾವಿ ಕೋಣ ಇಲ್ಲಿ ಕಟ್ಟಿಹಾಕಿದ್ದೇವೆ, ನೋಡಿ! Photos

Published On - 8:29 am, Fri, 5 March 21

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು